ಮೀನುಗಾರಿಕೆಯಿಂದ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸ್ವಯಂ ಉದ್ಯೋಗ, ಆದಾಯ ಹೆಚ್ಚಳ ನಿರೀಕ್ಷೆ

ಬೆಂಗಳೂರು : ಮೀನುಗಾರಿಕೆಗೆ ಉತ್ತೇಜನ ನೀಡಿದಷ್ಟೂ ಸ್ವಯಂ ಉದ್ಯೋಗ, ಕೃಷಿಯ ಜೊತೆಗೆ ಮೀನುಗಾರಿಕೆಯಿಂದ ಆದಾಯ ಹೆಚ್ಚಳವಾಗುವುದು ಹಾಗೂ ರಾಜ್ಯದ ಒಟ್ಟು ಜಿಡಿಪಿಯಲ್ಲಿ ವೃದ್ಧಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಬ್ಬನ್ ಪಾರ್ಕಿನಲ್ಲಿ ಸರ್ಕಾರಿ ಮತ್ಸ್ಯಾಲಯದ ಆಧುನೀಕರಣ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದನ್ನ ಮನಗಂಡು ನಮ್ಮ ಪ್ರಧಾನಿಗಳು ಮೀನುಗಾರಿಕೆಗೆ ಪ್ರತ್ಯೇಕ ಇಲಾಖೆಯನ್ನು ಮಾಡಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಜಾರಿ ಮಾಡಿದ್ದಾರೆ. ಇದಕ್ಕೆ ಅತಿಹೆಚ್ಚಿನ ಸಹಾಯಧನ ಅತಿ ಹೆಚ್ಚು ಜನರಿಗೆ ದೊರೆತಿದೆ. ಈ ಯೋಜನೆಯ ಸಂಪೂರ್ಣ ಲಾಭವನ್ನು ಮೀನುಗಾರಿಕೆ ಇಲಾಖೆ ಪಡೆದುಕೊಳ್ಳಬೇಕು ಎಂದರು.

ಲಾಲ್ ಬಾಗ್ ಮತ್ತು ಮಂಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಅಕ್ವೇರಿಯಂ ಸ್ಥಾಪನೆ : ಕಬ್ಬನ್ ಪಾರ್ಕ್ ನಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣವಾಗಲಿರುವ ಅಕ್ವೇರಿಯಂ ಉತ್ತಮವಾಗಿ ಮೂಡಿಬರಬೇಕು. ಲಾಲ್ ಬಾಗ್ ನಲ್ಲಿ ಪಿಪಿಪಿ ಮಾದರಿಯಲ್ಲಿ ಅಕ್ವೇರಿಯಂ ನಿರ್ಮಾಣ ಮಾಡಲು ಚಿಂತನೆ ನಡೆದಿದೆ ಹಾಗೂ ಇದೇ ಮಾದರಿಯ ಅಕ್ವೇರಿಯಂ ಅನ್ನು ಮಂಗಳೂರಿನ ಕಡಲತೀರದಲ್ಲಿ ನಿರ್ಮಿಸುವ ಉದ್ದೇಶವಿದೆ. ಸಿಂಗಪೂರ್, ದುಬೈ, ಯೂರೋಪ್ ಗಳಲ್ಲಿರುವ ಟನಲ್ ಅಕ್ವೇರಿಯಂಗಳಂತೆ ಮಕ್ಕಳಿಗೆ ಹೆಚ್ಚಿನ ಆಕರ್ಷಣೆ ಉಂಟು ಮಾಡುವ ರೀತಿಯಲ್ಲಿ ನಿರ್ಮಾಣವಾಗಲಿದೆ ಹಾಗೂ ಆಲಮಟ್ಟಿಯಲ್ಲಿ ಮೀನಿನ ಮರಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಮೀನುಗಾರಿಗೆ ಇಲಾಖೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದೇ ವರ್ಷದಲ್ಲಿ ಪ್ರಾರಂಭಿಸಲಾಗುವುದು ಎಂದರು.

ಮೀನುಗಾರಿಕೆ ದೊಡ್ಡ ಉದ್ಯಮವಾಗಬೇಕು : 2021-2022 ನೇ ಸಾಲಿನಲ್ಲಿ ಒಂದು ಮಿಲಿಯನ್ ಟನ್ ಉತ್ಪಾದನೆಯನ್ನು ಮಾಡಿ ಉತ್ತಮೆ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿಗಳು ಮೀನುಗಾರಿಕೆ ದೊಡ್ಡ ಉದ್ಯಮವಾಗಿ ಬೆಳೆಯಲು ಅವಕಾಶವಿದೆ. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಮೀನುಗಾರಿಕೆ ವೃತಿಯಲ್ಲಿರುವವರಿಗೆ ಒಟ್ಟು 10 ಸಾವಿರ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುತ್ತಿದೆ. ರೈತ ವಿದ್ಯಾ ನಿಧಿ ಯೋಜನೆಯನ್ನು ಮೀನುಗಾರರು ಹಾಗೂ ನೇಕಾರರ ಮಕ್ಕಳಿಗೂ ವಿಸ್ತರಿಸಲಾಗಿದೆ. ದುಡಿಯುವ ವರ್ಗದಿಂದಲೇ ದೊಡ್ಡ ಬದಲಾವಣೆ ತರಬಹುದು. ಆರ್ಥಿಕತೆ ಎಂದರೆ ಜನರ ಕ್ರಿಯಾಶೀಲತೆ. ದುಡಿಯುವ ವರ್ಗಕ್ಕೆ ಸಹಾಯ ಮಾಡಿದರೆ ಅವರ ಆದಾಯದ ಜೊತೆಗೆ ರಾಜ್ಯದ ಆದಾಯವೂ ಹೆಚ್ಚಾಗುತ್ತದೆ. ದುಡಿಯುವ ಸಂಸ್ಕತಿಯನ್ನು ಸರ್ಕಾರ ತರುತ್ತಿದೆ. ಉದ್ಯೋಗ ನೀತಿಯನ್ನು ರೂಪಿಸಲಾಗುತ್ತಿದೆ. ಹೆಚ್ಚಿನ ಉದ್ಯೋಗ ನೀಡುವ ಉದ್ಯಮಗಳಿಗೆ ವಿಶೇಷ ಪೆÇ್ರೀತ್ಸಾಹಕಗಳನ್ನು ನೀಡಲಾಗುತ್ತಿದೆ. ಆಮೂಲಾಗ್ರ ಬದಲಾವಣೆಯನ್ನು ಉದ್ಯೋಗ ಕ್ಷೇತ್ರದಲ್ಲಿ ತರಲಾಗುತ್ತಿದೆ. ವೈಜ್ಞಾನಿಕವಾಗಿ ಮೀನುಗಾರಿಕೆಯನ್ನು ಅಭಿವೃದ್ಧಿಗೊಳಿಸಿ ದೊಡ್ಡ ಪ್ರಮಾಣದಲ್ಲಿ ರಫ್ತು ಮಾಡುವ ಕನಸಿದೆ. ಅದನ್ನು ನನಸು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಯವ್ಯಯದಲ್ಲಿ ಮೀನುಗಾರಿಕೆಗೆ ಉತ್ತೇಜನ: ಮೀನುಗಾರಿಕೆಯ ಉತ್ಪಾದನೆ, ಸಂಸ್ಕರಣೆ ಹಾಗೂ ರಫ್ತಿನ ಮೇಲೆ ಹೆಚ್ಚಿನ ಒತ್ತು ನೀಡಿ ಅದಕ್ಕೆ ತಕ್ಕಹಾಗೆ ಕಾರ್ಯಕ್ರಮಗಳನ್ನು ಹಾಗೂ ಹಣಕಾಸಿನ ವ್ಯವಸ್ಥೆಗಳನ್ನು ಜೋಡಿಸಿಕೊಳ್ಳಲಾಗುವುದು. ಈಗಾಗಲೇ ಆಯವ್ಯಯದಲ್ಲಿ ಒಳನಾಡು ಮೀನುಗಾರಿಕೆಗೆ ಪ್ರತಿಯೊಂದು ಗ್ರಾಮ ಪಂಚಾಯತಿಗೆ ಒಂದು ಕೆರೆಯನ್ನು ಮೀಸಲಿಟ್ಟು ಅಲ್ಲಿನ ಆದಾಯವನ್ನು ಪಂಚಾಯತಿಯ ಕಾರ್ಯಕ್ರಮಗಳಿಗೆ ಬಳಕೆ ಮಾಡಲಾಗುವುದು. ಸುಮಾರು 2500 ಪಂಚಾಯಿತಿಗಳಲ್ಲಿ ಮೀನುಗಾರಿಕೆ ಕೊಳಗಳನ್ನು ಇದೇ ವರ್ಷದಲ್ಲಿ ಪ್ರಾರಂಭ ಮಾಡಲಾಗುವುದು. ಸಮುದ್ರದಾಳದ ಮೀನುಗಾರಿಕೆಯಲ್ಲಿ ದೊಡ್ಡ ಬದಲಾವಣೆಯನ್ನು ತರಲಾಗುತ್ತಿದೆ. ಎಂಟು ಮೀನಿಗಾರಿಕೆ ಬಂದುರುಗಳ ಹೂಳು ತೆಗೆಸಿ ದೊಡ್ಡ ಸಾಮಥ್ರ್ಯದ ದೋಣಿಗಳು ಅಲ್ಲಿಗೆ ಬರುವಂತೆ ವ್ಯವಸ್ಥೆ ಮಾಡಿ, ಅವುಗಳ ನವೀಕರಣಕ್ಕಾಗಿ ಆಯವ್ಯಯದಲ್ಲಿ ಅನುದಾನ ಒದಗಿಸಲಾಗಿದೆ. ಸಮುದ್ರದಾಳದ ಮೀನುಗಾರಿಕೆಗೆ ವಿಶೇಷವಾದ 100 ಹೈಸ್ಪೀಡ್ ದೋಣಿಗಳನ್ನು ಈ ಬಾರಿಯ ಬಜೆಟ್ ನಲ್ಲಿ ಮಂಜೂರು ಮಾಡಲಾಗಿದೆ. ಇದಕ್ಕೆ 150 ಅರ್ಜಿಗಳು ಈಗಾಗಲೇ ಸ್ವೀಕೃತವಾಗಿವೆ. ಇದೇ ತಿಂಗಳು ಅವುಗಳಿಗೆ ಮಂಜೂರಾತಿ ನೀಡಲು ಇಲಾಖೆ ನಿದೇರ್ಶಕರಿಗೆ ಸೂಚಿಸಿದ್ದೇನೆ ಎಂದರು. ಸಮುದ್ರದಾಳದ ಮೀನುಗಾರಿಕೆಯಲ್ಲಿ ದೊರೆತ ಮೀನುಗಳಿಗೆ ಸಂಸ್ಕರಣಾ ಘಟಕವನ್ನು ಸ್ಥಾಪಿಸಬಹುದು. ಕೆಲವು ದೊಡ್ಡ ಪ್ರಮಾಣದ ಸಂಸ್ಕರಣಾ ಘಟಕಗಳ ಮುಖ್ಯಸ್ಥರೊಂದಿಗೆ ಮಾತನಾಡಿದ್ದು, ನಮ್ಮ ಕಡಲು ತೀರದಲ್ಲಿಯೂ ಅತಿ ಹೆಚ್ಚು ರಫ್ತನ್ನು ಮೀನುಗಾರಿಕೆಯಲ್ಲಿ ಮುಂದಿನ ದಿನಗಳಲ್ಲಿ ಮಾಡಬೇಕು. ಈಗಾಗಲೇ 50ಕ್ಕಿಂತ ಹೆಚ್ಚು ರೈತ ಉತ್ಪಾದಕರ ಸಂಘಗಳ ರಚನೆಯಾಗಿದ್ದು, ಅವುಗಳಿಗೆ ಹೆಚ್ಚಿನ ಇತ್ತು ನೀಡಿ, ಅವುಗಳ ಮುಖಾಂತರ ಮೀನುಗಾರರಿಗೆ ಅಗತ್ಯವಿರುವ ಸವಲತ್ತುಗಳನ್ನು ನೀಡುವ ಕೆಲಸ ಮಾಡಬಹುದು. ಸಂಪೂರ್ಣ ಹವಾನಿಯಂತ್ರಿತ ವಾಹನಗಳನ್ನು ಅಲ್ಲಲ್ಲಿ ಮರುಕಟ್ಟೆ ವ್ಯವಸ್ಥೆಯನ್ನು ಮಾಡುವ ಯೋಜನೆಗೆ ಶೀಘ್ರವಾಗಿ ಮಂಜೂರಾತಿಯನ್ನು ನೀಡಲಾಗುವುದು ಎಂದರು.

ಮೀನುಗಾರಿಕೆಗೆ ವಿಫುಲ ಅವಕಾಶ: ಕರ್ನಾಟಕದಲ್ಲಿ ಮೀನುಗಾರಿಕೆಯಲ್ಲಿ ವಿಫುಲ ಅವಕಾಶಗಳಿದೆ. ಒಳನಾಡು ಮೀನುಗಾರಿಕೆಗೆ ಸ್ಪಷ್ಟ ನೀತಿ ಇಲ್ಲ. ಕರಾವಳಿ ಮೀನುಗಾರಿಕೆಗೂ, ಒಳನಾಡು ಮೀನುಗಾರಿಕೆಗೆ ವ್ಯತ್ಯಾಸಗಳಿವೆ. ಒಳನಾಡು ಮೀನುಗಾರಿಕೆಗೆ ಮಹತ್ವ ನೀಡಿ, ಮೀನು ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಸ್ಥಳೀಯ ಉತ್ಪಾದನೆಗೊಂಡು ಸ್ಥಳೀಯರಿಗೆ ಲಾಭ ಸಿಗಬೇಕಿರುವುದು ಮುಖ್ಯ. ಮೀನುಗಾರಿಕೆಯೂ ಕೃಷಿಯಿದ್ದಂತೆ, ಸಮಗ್ರ ಕೃಷಿಯಲ್ಲಿ ಮೀನುಗಾರಿಕೆ, ಹೈನುಗಾರಿಕೆ, ಕುರಿ ಮತ್ತು ಹಂದಿ ಸಾಕಾಣಿಕೆ, ಆಹಾರ ಸಂಸ್ಕರಣೆ, ಮಾರುಕಟ್ಟೆ ಸೇರಿದಂತೆ ಎಲ್ಲವೂ ಒಳಗೊಂಡಿರುತ್ತದೆ. ಈ ಎಲ್ಲ ಅಂಶಗಳನ್ನು ಜೋಡಿಸುವ ಮೂಲಕ ಮೀನುಗಾರಿಕೆ ವಲಯ ಹಾಗೂ ಮೀನುಗಾರರ ಅಭಿವೃದ್ಧಿ ಗೆ ಮೀನುಗಾರಿಕೆ ಇಲಾಖೆ ಗಮನಹರಿಸಬೇಕು. ರಾಜ್ಯದಲ್ಲಿ 330 ಕಿ.ಮೀ. ಕರಾವಳಿ ಪ್ರದೇಶವಿದ್ದು, ಮೀನುಗಾರಿಕೆ ಹೆಚ್ಚಿಸಿ, ಸಂಸ್ಕರಿಸಿ, ಮೀನು ರಫ್ತಿಗೆ ವಿಫುಲ ಅವಕಾಶಗಳಿವೆ. ಬರುವ ದಿನಗಳಲ್ಲಿ ಮೀನುಗಾರಿಕೆ ಉತ್ಪಾದನೆ, ಸಂಸ್ಕರಣೆ ಹಾಗೂ ರಫ್ತಿಗೆ ಒತ್ತು ನೀಡುವ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ ನಿದೇರ್ಶಕ ರಾಮಚಾರ್ಯ, ಅಪರ ನಿದೇರ್ಶಕ ಡಿ.ತಿಪ್ಪೇಸ್ವಾಮಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರ ಸಹಕಾರದಿಂದ ಕರಾವಳಿಯ ಭಾಗದಲ್ಲಿ ನಿರೀಕ್ಷೆಗಿಂತ ಹೆಚ್ಚು ಅಭಿವೃದ್ಧಿಯಾಗುತ್ತಿದೆ. ಸಮುದ್ರ ಹಾಗೂ ಒಳನಾಡು ಮೀನುಗಾರಿಕೆ ಕ್ಷೇತ್ರ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಯೋಜನೆಯಾಗಿದ್ದು. ಮೀನುಗಾರಿಕೆಯ ಉತ್ಪಾದನೆಗೆ ಹೆಚ್ಚು ಮಹತ್ವ ನೀಡಬೇಕಾದರೆ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ತಳಿಗಳನ್ನು ಉಳಿಸಬೇಕು. ನಮ್ಮ ದೇಹದಲ್ಲಿ ಪೌಷ್ಠಿಕಾಂಶದ ಕೊರೆತೆಯಾಗಿದೆ, ಪೌಷ್ಟಿಕಾಂಶದ ಆಹಾರ ಮೀನು, ನಮ್ಮಲ್ಲಿ ತುಂಬಾ ಜನರಿಗೆ ಇದರ ಬಗ್ಗೆ ಗೊತ್ತಿಲ್ಲ, ಹಾಗಾಗಿ ಮನುಷ್ಯನ ದೇಹಕ್ಕೆ ಪೌಷ್ಟಿಕಾಂಶ ಕೊಡುವ ಶಕ್ತಿ ಮೀನುಗಳು ಹೊಂದಿದೆ. ನೀರಾವರಿ ನಿಗಮದಿಂದ ಆಳಮಟ್ಟಿಯಲ್ಲಿ ಮೀನುಗಳ ಉತ್ಪಾದನಾ ಕೇಂದ್ರಕ್ಕೆ ಒದಗಿಸಿದ್ದಾರೆ. ತಮಿಳುನಾಡು, ಗುಜರಾತ್, ಆಂಧ್ರಪ್ರದೇಶ, ದಲ್ಲಿ ಮೀನು ಖರೀದಿಸಿ ಒದಗಿಸುವ ವ್ಯವಸ್ಥೆ ಇತ್ತು, ಈಗ ನಮ್ಮಲ್ಲಿ ಮೀನುಗಳನ್ನು ಉತ್ಪಾದಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಕೋಲ್ಡ್ ಸ್ಟೋರೇಜ್ ಸೇರಿದಂತೆ ಮಾರುಕಟ್ಟೆ ವ್ಯವಸ್ಥೆ, ಮಾರಾಟ ವ್ಯವಸ್ಥೆ ಹಾಗೂ ಸ್ವಾ ಉದ್ಯೋಗ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

-ಎಸ್ ಅಂಗಾರ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರ.

ಪ್ರಕೃತಿ ಬಹಳ ಸುಂದರವಾಗಿದೆ. ಸಮುದ್ರದ ಒಳಗೆ ಇನ್ನೂ ಹೆಚ್ಚು ಸುಂದರವಾಗಿ ಕಾಣುತ್ತದೆ, ಆದರೆ ಈ ಅಕ್ವೇರಿಯಂ ಮೂಲಕ ಅದರ ಸೌಂದರ್ಯವನ್ನು ನೋಡಬಹುದು. ಮೀನುಗಾರಿಕೆ ಬಹಳ ಹಳೇಯ ವೃತ್ತಿ, ಅವರಿಗೆ ಸರ್ಕಾರ ಸಹಾಯ ಮತ್ತು ನೆರವು ಮಾಡಬೇಕು. ಮೀನುಗಾರಿಕೆ ಸಾಮಾನ್ಯ ವೃತ್ತಿ ಅಲ್ಲ, ಸಮುದ್ರಕ್ಕೆ ಹೋದಾಗ ಮೀನು ಹಿಡಿದು ವಾಪಸ್ ಬಂದರೆ ಸಂತೋಷ ಆದರೆ ಸಾಕಷ್ಟು ಜನರು ಸಾಯುತ್ತಿದ್ದಾರೆ. ಹಾಗಾಗಿ ಅವರಿಗೆ ಸೂಕ್ತವಾದ ತರಬೇತಿ ನಿಡಬೇಕು. ಜೊತೆಗೆ ಅವರಿಗೆ ಸೌಲಭ್ಯಗಳನ್ನು ಕಲ್ಪಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

-ರಿಜ್ವಾನ್ ಅರ್ಷದ್. ಶಾಸಕರು ಶಿವಾಜಿ ನಗರ.

Recent Articles

spot_img

Related Stories

Share via
Copy link
Powered by Social Snap