ಮೇಕೆದಾಟು ಪಾದಯಾತ್ರೆ : ಕೇಸ್‌ ಹಿಂಪಡೆಯಲು ಮುಂದಾಯ್ತು ಸರ್ಕಾರ…!

ಬೆಂಗಳೂರು: 

    ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸುವಂತೆ ಕೋರಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

    ಬೆಂಗಳೂರು ಸೇರಿದಂತೆ ಪಟ್ಟಣ, ನಗರಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಂದೋಲನದ ನೇತೃತ್ವ ವಹಿಸಿದ್ದರು.

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಇವರ ವಿರುದ್ಧ ರಾಮನಗರ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. 

    ಮಂಡ್ಯ ಎಂಎಲ್ಸಿ ದಿನೇಶ್ ಗೂಳಿಗೌಡ ಅವರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸಂಪುಟ ಉಪಸಮಿತಿ ಮುಂದಿಟ್ಟು ಚರ್ಚೆ ನಡೆಸಿ ನಂತರ ರವಾನಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಸೂಚಿಸಿದ್ದಾರೆ.

    ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಹೋರಾಟಗಾರರ ಮೇಲಿನ ಪ್ರಕರಣಗಳ ಕಡತವನ್ನು ಸಚಿವ ಸಂಪುಟ ಉಪ ಸಮಿತಿಯ ಮುಂದೆ ತಂದು ಅಗತ್ಯ ಕ್ರಮ ಕೈಗೊಂಡು, ಕ್ಯಾಬಿನೆಟ್ ಮುಂದೆ ತರುವಂತೆ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap