ಬೆಂಗಳೂರು:
ವಿವಾದ ಹುಟ್ಟಿಸಿರುವ ಮೇಕೆದಾಟು ಯೋಜನೆ ಜಾರಿಗೊಳಿಸಲು ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿದೆ. ಆ ಯೋಜನೆ ಜಾರಿಗೊಳಿಸಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. ‘ತಮಿಳುನಾಡಿಗೆ ಇದುವರೆಗೆ ನಾವು 310 ಟಿಎಂಸಿ ಅಡಿ ನೀರು ಹರಿಸಿದ್ದೇವೆ. ವಾರ್ಷಿಕ ನೀಡಬೇಕಾಗಿರುವುದು 177.25 ಟಿಎಂಸಿ. ನಮಗೆ ನೀರು ಸಂಗ್ರಹ ಮಾಡಲು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲ’ ಎಂದು ಹೇಳಿದ್ದಾರೆ. ಇಂಧನ ಇಲಾಖೆಯಿಂದ ಮೇಕೆದಾಟು ಯೋಜನೆ ಡಿಪಿಆರ್ ಸಿದ್ದ ಮಾಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ‘ಹೆಚ್ಚುವರಿ ನೀರನ್ನು ಹರಿಸಿದರೆ ಅದರಿಂದ ತಮಿಳುನಾಡು ರಾಜ್ಯಕ್ಕೂ ಉಪಯೋಗವಿಲ್ಲ. ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗುತ್ತದೆ. ಆದಕ್ಕೆ ಬದಲು ಮೇಕೆದಾಟು ಯೋಜನೆ ಜಾರಿಗೊಳಿಸಿದರೆ ಅಲ್ಲಿ ನೀರನ್ನು ಸಂಗ್ರಹಿಸಬಹುದು’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
