ಮೈತ್ರಿ ಧರ್ಮ ಪಾಲಿಸುತ್ತೇವೆ : ದಿನೇಶ್ ಗುಂಡೂರಾವ್

 ಮಂಗಳೂರು:

      ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ಅಡಚಣೆಯಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್ ಅವರು ತಿಳಿಸಿದರು.

      ಮಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷದಿಂದ ಕಂಟಕವಿಲ್ಲ, ಈ ಮೈತ್ರಿ ಸರ್ಕಾರವು ಐದು ವರ್ಷದ ಅವಧಿಯನ್ನು ಪೂರೈಸುತ್ತದೆ ಇದರಲ್ಲಿ ಯಾವುದೇ ರೀತಿಯ ಅನುಮಾನ ಬೇಡ ಎಂದು ಅವರು ಹೇಳಿದರು.

      ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ವಿಚಾರ ನನಗೆ ಗೊತ್ತಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ತಿಳಿದಿಲ್ಲ. ಒಂದು ವೇಳೆ ಅವರು, ನಾವೆಲ್ಲಾ ಕೆಲಸ ಮಾಡಿದರೂ ಕೂಡಾ ಜನ ನಮ್ಮನ್ನ ಬೆಂಬಲಿಸಲಿಲ್ಲವಲ್ಲ ಎಂಬ ಅರ್ಥದಲ್ಲಿ ಹೇಳಿರಬಹುದು.ಅವರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತದೆ. ಆದರೂ ಅವರು ಹಿರಿಯರು ಎಂದು ತಿಳಿದು ಉತ್ತಮ ಸ್ಥಾನಮಾನ ನೀಡಲಾಗಿದೆ ಎಂದರು.

      ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಯಾವುದೇ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿಲ್ಲ, ಮಾಜಿ ಪ್ರದಾನಿ ಅಟಲ್‍ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನ ಪಡೆಯಲು ಬಂದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವುದು ಸರಿಯಲ್ಲ ಎಂದು ಮಾತ್ರ ಹೇಳಿದ್ದಾರೆ. ಕಾಶ್ಮೀರದಲ್ಲಿ ಅತ್ಯಾಚಾರ ಮಾಡಿದವರ ಪರ ಬಿಜೆಪಿ ಇರುತ್ತದೆ. ಎಂದು ಆಪಾದಿಸಿದರು. ತಮ್ಮದು ಏನೇ ತಪ್ಪಿದ್ದರೂ ಕೂಡಾ ಬಲಪಂಥೀಯರು ಪ್ರಗತಿಪರ ಚಿಂತಕರ ಬಾಯಿ ಮುಚ್ಚಿಸುತ್ತಾರೆ ಎಂದು ಹೇಳಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link