ಬೆಂಗಳೂರು:
ಇಂದು ತಮ್ಮ 68 ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಳಗ್ಗಿನಿಂದಲೇ ಶುಭಾಶಯಗಳ ಸುರಿಮಳೆಯೇ ಬರುತ್ತಿವೆ.
ಪ್ರಧಾನಿ ಮೋದಿಗೆ 68 ರ ಜನ್ಮದಿನ : ವಾರಣಾಸಿಯಲ್ಲಿ ಆಚರಣೆಗೆ ಸಿದ್ಧತೆ
ಮೋದಿ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕರ್ನಾಟಕದ ಹಾಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ, ಶುಭಾಶಯ ಕೋರಿದ್ದಾರೆ.
ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ಸದಾ ಸಂತೋಷ ದೊರಕಲಿ ಎಂದು ಹಾರೈಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
Happy Birthday to our PM, Narendra Modi ji! Wishing him good health and happiness always.@narendramodi
— Rahul Gandhi (@RahulGandhi) September 17, 2018
‘ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ದೇಶದ ಗೌರವಾನ್ವಿತ ಪ್ರಧಾನಮಂತ್ರಿಗಳಾದ @narendramodi ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ.#HappyBdayPMModi
— H D Kumaraswamy (@hd_kumaraswamy) September 17, 2018
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ದೇಶ ಮುನ್ನಡೆಸುವ ಜವಾಬ್ದಾರಿ ಹೊತ್ತಿರುವ ನಿಮ್ಮ ಆರೋಗ್ಯ ವೃದ್ಧಿಸಲಿ ಎಂದು ಟ್ವೀಟ್ ಮಾಡಿದ್ದಾರೆ.
Dear @narendramodi ji,
It gives me great pleasure in extending my heartiest greetings on the occasion of your birthday. May God bless you with a long and healthy life to continue serving the Nation with renewed zeal and dedication.@narendramodi ಅವರಿಗೆ ಜನ್ಮದಿನದ ಶುಭಾಶಯಗಳು. pic.twitter.com/aFuUKksUe4
— H D Devegowda (@H_D_Devegowda) September 17, 2018
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡ ಟ್ವಿಟರ್ ಮೂಲಕ ಪ್ರಧಾನಿಯವರಿಗೆ ಜನ್ಮದಿನದ ಶುಭ ಹಾರೈಸಿದ್ದಾರೆ. ನಮ್ಮ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು. ಭಾರತವನ್ನು ಅಭಿವೃದ್ಧಿಗೊಳಿಸುವ ಅವರ ಮಹತ್ವಾಕಾಂಕ್ಷೆಯನ್ನು ಈಡೇರಿಸಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
Wishing our beloved Prime Minister Shri Narendra Modi a very Happy Birthday. May God give him good health and strength to fulfill his vision of transforming India into a progressive and a developed nation.#HappyBdayPMModi pic.twitter.com/QZRadu0Tp1
— B.S. Yeddyurappa (@BSYBJP) September 17, 2018
“ಜನ್ಮದಿನ ಶುಭಾಶಯಗಳು ನರೇಂದ್ರ ಮೋದಿ ಅವರೇ. ನಿಮಗೆ ಉತ್ತಮ ಆರೋಗ್ಯ, ದೀರ್ಘ ಆಯುಷ್ಯ ಮತ್ತು ಜನರಿಗೆ ನೀವು ನೀಡಿದ ಭರವಸೆಗಳನ್ನು ಈಡೇರಿಸುವ ಶಕ್ತಿ ಸಿಗಲಿ ಎಂದು ಈ ಸಂದರ್ಭದಲ್ಲಿ ಹಾರೈಸುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Happy birthday to PM @narendramodi. Wishing you good health, long life and strength to fulfill the promises given to the people.#HappyBdayPMModi
— Siddaramaiah (@siddaramaiah) September 17, 2018