ಮೋದಿ ಫೋಟೋ ಬಳಕೆ ವಿಚಾರ : ಈಶ್ವರಪ್ಪಗೆ ಅಧಿಕಾರವಿಲ್ಲ : ಆರ್‌ ಅಶೋಕ್‌

ಬೆಂಗಳೂರು:

   ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರಿಗೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಫೋಟೋ ಬಳಕೆ ಮಾಡುವ ಅಧಿಕಾರವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಶನಿವಾರ ಹೇಳಿದ್ದಾರೆ.

   ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪಗೆ ಮೋದಿ ಫೋಟೋ ಬಳಕೆ ಮಾಡಿಕೊಳ್ಳುವ ಅಧಿಕಾರವಿಲ್ಲ. ಒಂದು ವೇಳೆ ಬಳಕೆ ಮಾಡಿದರೆ ಅದು ತಪ್ಪು. ಸರ್ಕಾರಿ ಕಾರ್ಯಕ್ರಮ ಆಗಿದ್ದರೆ ಪ್ರಧಾನಿ ಆಗಿರುವುದರಿಂದ ಮೋದಿ ಫೋಟೊ ಬಳಸಿಕೊಳ್ಳಬಹುದು. ಆದರೆ, ರಾಜಕೀಯವಾಗಿ ಚುನಾವಣೆ ವೇಳೆ‌ ಬಿಜೆಪಿಗೆ ಮಾತ್ರ ಮೋದಿ ಫೋಟೊ ಬಳಕೆಯ ಅಧಿಕಾರ ಇದೆ ಎಂದು ಹೇಳಿದ್ದಾರೆ. 

   ಈಶ್ವರಪ್ಪ ಅವರು ಅನಧಿಕೃತವಾಗಿ ಮೋದಿಯವರ ಫೋಟೋ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ನಾಮಪತ್ರ ಸಲ್ಲಿಸಿದ ಬಳಿಕ ಈ ಬಗಗೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

   ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ವ್ಯಂಗ್ಯವಾಡಿದ್ದರು. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯೇ, ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು. ಇದರೊಂದಿಗೆ ಮೋದಿ ಫೋಟೋ ಕುರಿತು ಈಶ್ವರಪ್ಪ ಹಾಗೂ ಬಿವೈ ರಾಘವೇಂದ್ರ ನಡುವೆ ಜಟಾಪಟಿ ಶುರುವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link