ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಡಿ.ಕೆ. ಶಿವಕುಮಾರ್

ಬೆಂಗಳೂರು

     ಈ ಬಾರಿ ಚುನಾವಣೆಯಲ್ಲಿ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿAದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ‘ ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ‘ ಎಂದರು.

     ಅರ್ಜಿ ಸಲ್ಲಿಕೆ ನಂತರ ಆಕಾಂಕ್ಷಿಗಳು ಸಿದ್ದರಾಮಯ್ಯ ಹಾಗೂ ನಿಮ್ಮ ಮನೆಗೆ ಭೇಟಿ ನೀಡುತ್ತಿರುವುದರಿಂದ ತೊಂದರೆ ಆಗುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ, ‘ ಯಾರೇ ಆಗಲಿ ಒಬ್ಬರಿಗೆ ಒಂದೇ ಟಿಕೆಟ್. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ‘ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap