ಯುಪಿಎಸ್ಸಿ ಪರೀಕ್ಷೆಯಲ್ಲಿ ಡಾ. ರಾಜ್ ಕುಮಾರ್ ಅಕಾಡೆಮಿಯ 8 ಮಂದಿ ತೇರ್ಗಡೆ

ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗದ(ಯುಪಿಎಸ್​ಸಿ) 2021-22ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ 30ಕ್ಕೂ ಹೆಚ್ಚು ಮಂದಿ ಕರ್ನಾಟಕದವರೇ ಆಗಿದ್ದು, ಅದರ ಪೈಕಿ 8 ಅಭ್ಯರ್ಥಿಗಳು ಡಾ.ರಾಜ್​ಕುಮಾರ್​ ಸಿವಿಲ್ ಸರ್ವೀಸ್ ಅಕಾಡೆಮಿಯಲ್ಲಿ ಕೋಚಿಂಗ್​ ಪಡೆದವರಾಗಿದ್ದಾರೆ.

ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ದೇಶಾದ್ಯಂತ 685 ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ. ಇದರಲ್ಲಿ 30ಕ್ಕೂ ಹೆಚ್ಚು ಮಂದಿ ಕರ್ನಾಟಕದವರೇ ಇದ್ದಾರೆ. ಡಾ.ರಾಜ್​ಕುಮಾರ್​ ಸಿವಿಲ್ ಸರ್ವೀಸ್ ಅಕಾಡೆಮಿಯಲ್ಲಿ ಕೋಚಿಂಗ್​ ಪಡೆದ 8 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿರುವುದಕ್ಕೆ ರಾಘವೇಂದ್ರ ರಾಜ್ ಕುಮಾರ್ ಅವರ ಮನೆಗೆ ಸಾಧಕರನ್ನು ಆಹ್ವಾನಿಸಿ ಶುಭಕೋರಿದರು.

ಈ ಕುರಿತು ರಾಘವೇಂದ್ರ ರಾಜ್ ಕುಮಾರ್ ಅವರು ಮಾತನಾಡಿ, ಅಪ್ಪಾಜಿ ಓದಿರಲಿಲ್ಲ, ಅವರ ಹೆಸರಿನಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನಡುತ್ತಿದ್ದೇವೆ ಎಂಬ ಖುಷಿ ನಮ್ಮಲ್ಲಿದೆ. ಶ್ರೀಮಂತರ ಮಕ್ಕಳಂತೆ ಬಡವರ ಮಕ್ಕಳೂ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬುದು ನಮ್ಮ ಆಸೆ ಎಂದಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap