ಬೆಂಗಳೂರು:
ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಾಗಲೂರು ಮೂಲದ ಆರೋಪಿ ಬಂಧಿತ. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂರು ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ.
ಇತ್ತೀಚೆಗೆ ಆರೋಪಿಗಳು ಅಪ್ರಾಪ್ತೆಯ ಇನ್ಸ್ಟಾಗ್ರಾಮ್ ಖಾತೆಯಿಂದ ಫೋಟೋ ತೆಗೆದುಕೊಂಡು, ಅಶ್ಲೀಲವಾಗಿ ಮಾರ್ಫ್ ಮಾಡಿ ನಕಲಿ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಉಳಿದಿಬ್ಬರು ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಮೂವರೂ ಪರಸ್ಪರ ಸ್ನೇಹಿತರು. ಕ್ರೇಜ್ಗಾಗಿ ಯುವತಿಯರ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ