ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 2 ರಿಂದ 4 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1 ರಿಂದ ನಾಲ್ಕು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.