ರಾಜ್ಯದಲ್ಲಿ ಮೇ 30ರವರೆಗೂ ಮಳೆ ಸಾಧ್ಯತೆ….!

ಬೆಂಗಳೂರು:

     ಬೆಂಗಳೂರು ಸೇರಿದಂತೆ ಹಲವೆಡೆ ಕಳೆದ ಕೆಲ ದಿನಗಳಿಂದ ಸುರಿದ ಮಳೆ ದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿದೆ. ರಸ್ತೆಗಳಿಗೆ ಹಾಗೂ ಮನೆಗಳಿಗೆ ಮಳೆ ನೀರು ನುಗ್ಗಿ ಜನಜೀವನವೇ ಸಂಕಷ್ಟಕ್ಕೆ ಸಿಲುಕಿದೆ. ಅಪಾರ ಸಂಖ್ಯೆಯಲ್ಲಿ ಮರಗಳು ಹಾಗೂ ವಿದ್ಯುತ್ ಕಂಬಗಳು ಮನೆಗಳ ಮೇಲೆ ಮತ್ತು ವಾಹನಗಳ ಮೇಲೆ ಬಿದ್ದು ಜನ ಅಪಾರ ನಷ್ಟವನ್ನು ಅನುಭವಿಸುವಂತಾಗಿದೆ. 

       ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.  ಬೆಂಗಳೂರು ಸೇರಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ- ಯಾವ ಜಿಲ್ಲೆ ತಿಳಿಯಿರಿ ಜೊತೆಗೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗದ ಒಂದೆರಡು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲ ದಿನಗಳಿಂದ ಸಂಜೆಯಾಗುತ್ತಿದ್ದಂತೆ ರಾಜ್ಯದ ಬಹುತೇಕ ಮಳೆಯಾಗಿದೆ.

    ಗುಡುಗು, ಮಿಂಚು, ಬಲವಾದ ಗಾಳಿ ಬೀಸುವ ಮೂಲಕ ಆನೆಕಲ್ಲು ಮಳೆ ಸೃಷ್ಟಿದ ಸಮಸ್ಯೆಗಳಿಂದ ರಾಜ್ಯದ ಜನ ಹೊರಬರಲಾಗುತ್ತಿಲ್ಲ. ಹಲವೆಡೆ ರೈತಾಪಿ ವರ್ಗದ ಜನ ಧಾರಾಕಾರ ಮಳೆಗೆ ಬೆಳೆ ನಾಶದಿಂದ ಕಂಗಾಲಾಗಿದೆ. ಹಲವೆಡೆ ಸಿಡಿಲು ಬಡಿದು ಜನ ಹಾಗೂ ಜಾನುವಾರಗಳು ಪ್ರಾಣ ಕಳೆದುಕೊಂಡಿದ್ದಾರೆ.

    ಇನ್ನೂ ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರುತ್ತದೆ. ರಾಯಚೂರಿನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನ ಎಚ್‌ಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 20.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ಇಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 21.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, ಕೆಐಎಎಲ್‌ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 22.0 ಡಿಗ್ರಿ ಸೇರಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಇನ್ನೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಾರ ತಂಪೆರೆದಿದ್ದಾನೆ.

     ದೆಹಲಿಯಲ್ಲಿ ಗುಡುಗು ಸಹಿತ ಭಾರೀ ಮಳೆಗೆ ಬಿಸಿಲಿನ ತಾಪದಿಂದ ಶಮನವಾಗಿದೆ. ಬಿಸಿಲಿನ ಬೇಗೆಯಲ್ಲಿ ದಿನಗಟ್ಟಲೆ ಕಸಿವಿಸಿಗೊಂಡು ಬಿಸಿಲ ಅಲೆಗೆ ಸಾಕ್ಷಿಯಾದ ದಿಲ್ಲಿಗರು ಮೇ 25ರ ಗುರುವಾರದಂದು ಕೊಂಚ ರಿಲೀಫ್ ಆಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ, ಧೂಳಿನ ಬಿರುಗಾಳಿ ಮತ್ತು ಬಲವಾದ ಗಾಳಿ ಬೀಸಿದ್ದರಿಂದ ಕೊಂಚ ತಾಪಮಾನದಿಂದ ನೆಮ್ಮದಿ ಸಿಕ್ಕಂತಾಗಿದೆ. ದೆಹಲಿ-ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದಂತೆ ವಾತಾವರಣ ತಂಪಾಗಿದೆ.

     ಹವಾಮಾನ ವೈಪರೀತ್ಯದಿಂದಾಗಿ ಮುಂಬೈ-ದೆಹಲಿ ವಿಸ್ತಾರಾ ವಿಮಾನವನ್ನೂ ಜೈಪುರಕ್ಕೆ ತಿರುಗಿಸಲಾಯಿತು. ಇದಲ್ಲದೆ, ಮೇ 30 ರವರೆಗೆ ದೆಹಲಿ-ಎನ್‌ಸಿಆರ್ ಕಾರ್ಡ್‌ಗಳಲ್ಲಿ ಯಾವುದೇ ಶಾಖದ ಅಲೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ರಾಜಧಾನಿಯಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು IMD ಹೇಳಿದೆ. ಉತ್ತರ ಭಾರತದ ಇತರ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣದಲ್ಲೂ ಭಾರೀ ಮಳೆಯಾಗಿದ್ದು, ತಾಪಮಾನದಲ್ಲಿ ಕುಸಿತಕ್ಕೆ ಕಾರಣವಾಗಿದೆ. ಉಭಯ ರಾಜ್ಯಗಳ ಜಂಟಿ ರಾಜಧಾನಿ ಚಂಡೀಗಢ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಬಿರುಗಾಳಿ ಬೀಸಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap