ರಾಜ್ಯಸಭೆ ಚುನಾವಣೆ ಅಡ್ಡಮತದಾನ ಮಾಡಿದವರಿಗೆ ಸಂಕಷ್ಟ

ಉಚ್ಚಾಟಿಸಲು ಸಭಾಪತಿಗೆ ದೂರು

ಪ್ರಜಾಪ್ರಗತಿ. ಕಾಂ

ಬೆಂಗಳೂರು : ಶುಕ್ರವಾರ ರಾಜ್ಯಸಭೆ ಚುನಾವಣೆ ಮುಗಿದರು ಅದರ ಬಿಸಿ ಮಾತ್ರ ಇನ್ನೂ ಕಮ್ಮಿಯಾಗಿಲ್ಲ ಇದರ ಬೆನ್ನಲ್ಲೆ ಅಡ್ಡಮತದಾನ ಮಾಡಿದ ಇಬ್ಬರು ಶಾಸಕರನ್ನು ಉಚ್ಚಾಟಿಸುವಂತೆ ಸ್ಪೀಕರ್ ಗೆ ದೂರು ನೀಡಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಿಳಿಸಿದ್ದಾರೆ.

ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕೋಲಾರ ಕ್ಷೇತ್ರದ ಶಾಸಕ ಕೆ.ಶ್ರೀನಿವಾಸಗೌಡ ಮತ್ತು ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌.ಶ್ರೀನಿವಾಸ ಅವರನ್ನು ಉಚ್ಚಾಟಿಸಲು ಪಕ್ಷವು ನಿರ್ಧರಿಸಿದೆ. ಅವರಿಬ್ಬರ ಸದಸ್ಯತ್ವ ರದ್ದು ಮಾಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ನ್ಯಾಯಾಲಯಕ್ಕೂ ನಾವು ಹೋಗುತ್ತೇವೆ ಎಂದು ಹೇಳಿದರು.

ಸ್ವಯಂ ರಾಜೀನಾಮೆ ನೀಡಬೇಕು: ಶಾಸಕರ ಮನೆ ಮುಂದೆ ಜನ ಪ್ರತಿಭಟನೆ ಮಾಡಿದ್ದಾರೆ. ಮಾನ ಮರ್ಯಾದೆ ಇದ್ದರೆ ಅವರು ರಾಜೀನಾಮೆ ನೀಡಬೇಕು. ಕಾಂಗ್ರೆಸ್‌ ವಿರುದ್ಧ ಭಾನುವಾರ ಫ್ರೀಡಂ ಪಾರ್ಕ್ನಲ್ಲಿ ಮೌನ ಪ್ರತಿಭಟನೆ ಮಾಡಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಿಜೆಪಿ ಬಿ ಟೀಂ ಎನ್ನುವುದು ಗೊತ್ತಾಗಿದೆ. ಕಾಂಗ್ರೆಸ್‌ನವರು ಡೀಲ್‌ ಮಾಡಿದ್ದಾರೆ ಎಂದು ನೇರವಾಗಿ ಆರೋಪಿಸಿದರು.

ಚುನಾವಣೆಯಲ್ಲಿ ನೂರಾರು ಕೋಟಿ ಡೀಲ್ ನಡೆದಿದೆ : ಬಿಜೆಪಿ ಮುಖಂಡ ಸಿ.ಟಿ.ರವಿ ಕಾಂಗ್ರೆಸ್‌ ಕಚೇರಿಗೆ ಹೋಗಿ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲಾ ಯಾವ ಮುಖ ಇಟ್ಟುಕೊಂಡು ಮಾತನಾಡುತ್ತಾರೆ? ಮನ್ಸೂರ್‌ ಅಲಿಖಾನ್‌ ಅವರನ್ನು ನಿಲ್ಲಿಸಿ ಹೀಗೆ ಸೋಲಿಸಿದಿರಲ್ಲ, ಇದರಿಂದ ಏನು ಲಾಭ? ಎರಡನೇ ಪ್ರಾಶಸ್ತ್ಯ ಮತ ಹಾಕಿದ್ದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಿದ್ದರು. ಈ ಚುನಾವಣೆಯಲ್ಲಿ ನೂರಾರು ಕೋಟಿ ರು. ವ್ಯವಹಾರ ನಡೆದಿದೆ ಎಂದು ಹೇಳಿದ ಅವರು, 2023ರ ವಿಧಾನಸಭೆ ಚುನಾವಣೆಯಲ್ಲಿ ಜನ ನಮಗೆ ಮತ ಹಾಕುತ್ತಾರೆ. ದೊಡ್ಡ ಶಕ್ತಿಯಾಗಿ ಜೆಡಿಎಸ್‌ ಹೊರಹೊಮ್ಮಲಿದೆ. 30 ಜನರನ್ನು ಇಟ್ಟುಕೊಂಡಿದ್ದೇವೆ, ಬಡತನದ ಪಕ್ಷ ಇದು. ಆದರೂ ನಮಗೆ ಗೌರವ ಇದೆ. ಪ್ರಜಾಪ್ರಭುತ್ವದ ಸಿದ್ಧಾಂತವನ್ನು ನಮ್ಮ ಶಾಸಕರು ಎತ್ತಿ ಹಿಡಿದಿದ್ದಾರೆ. ಅಲ್ಪಸಂಖ್ಯಾತರಿಗೆ ಗೊತ್ತಾಗಿದೆ. ನನ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಅಲ್ಪಸಂಖ್ಯಾತ, ರೈತರ ಮಕ್ಕಳಿಗೆ ಜೆಡಿಎಸ್‌ ಏನು ಮಾಡುತ್ತಿದೆ ಎಂದು ಜನರಿಗೆ ಗೊತ್ತಾಗಿದೆ ಎಂದರು.

Recent Articles

spot_img

Related Stories

Share via
Copy link
Powered by Social Snap