ಬೆಂಗಳೂರು
ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಬಿ.ಜೆ.ಪುಟ್ಟಸ್ವಾಮಿ ಅವರು ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಮನವಿಗೆ ಸ್ಪಂದಿಸಿ ಪುಟ್ಟಸ್ವಾಮಿ ಅವರು ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಮುಂದುವರೆಯಲು ನಿರ್ಧರಿಸಿದ್ದಾರೆ.
