ಬೆಂಗಳೂರು
ತೋಟದ ಮನೆಯಲ್ಲಿ ಮಲಗಿದ್ದ ರೈತರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚೆನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಣೀಪುರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೃತ ರೈತನನ್ನು ಬ್ರಹ್ಮಣೀಪುರದ ಪುಟ್ಟಸ್ವಾಮಿ(40) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದ ತೋಟದ ಮನೆಯಲ್ಲಿ ರಾತ್ರಿ ಮಲಗಿದ್ದ ವೇಳೆ ಪುಟ್ಟಸ್ವಾಮಿ ಅವರು ಬೆಳಗ್ಗೆ ಮೃತದೇಹವಾಗಿ ಪತ್ತೆಯಾಗಿದ್ದಾರೆ.
ತೋಟಕ್ಕೆ ಹೋದವರು ಮೃತದೇಹ ನೋಡಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಉಸಿರುಗಟ್ಟಿ ಮೃತಪಟ್ಟಿರುವುದು ಕಂಡುಬಂದಿದೆ.
ದುಷ್ಕರ್ಮಿಗಳು ಪುಟ್ಟಸ್ವಾಮಿ ಅವರನ್ನು ಮಲಗಿದ್ದಲ್ಲೇ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
