ಬೆಂಗಳೂರು
ದಕ್ಷ ಐಎಎಸ್ ಅಧಿಕಾರಿ ಎಂದೇ ಖ್ಯಾತರಾದ ರೋಹಿಣಿ ಸಿಂಧೂರಿ ಅವರನ್ನು ಮತ್ತೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಇಬ್ಬರು ಐಎಎಸ್ ಅಧಿಕಾರಿಗಳನ್ನು ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದ್ದು ಇಂದು ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡಿ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಅವರನ್ನು ನೇಮಕ ಮಾಡಲಾಗಿದೆ.
2010ನೇ ಬ್ಯಾಚ್ ಐಎಎಸ್ ಅಧಿಕಾರಿ ಸಿ. ಪಿ. ಶೈಲಜಾರನ್ನು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅವರು ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. 2019ರ ಸೆಪ್ಟೆಂಬರ್‌ನಲ್ಲಿ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿತ್ತು.
ಕೆಲವು ದಿನಗಳ ಕಾಲ ಯಾವುದೇ ಹುದ್ದೆಯನ್ನು ಸರ್ಕಾರ ನೀಡಿರಲಿಲ್ಲ. ಕೊನೆಗೆ ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶನಾಲಯದ ಆಯುಕ್ತರಾಗಿದ್ದ ನೇಮಿಸಲಾಗಿತ್ತು ಈಗ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
