ಆಂಧ್ರಪ್ರದೇಶ
ಜಿಲ್ಲೆಯಲ್ಲಿ ತಿರುಪತಿಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಕ್ರೂಸರ್ ಶುಕ್ರವಾರ ಬೆಳಗ್ಗೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರಿದ್ದಾರೆ ಎಂದು ಹೇಳಿದ್ದಾರೆ.
“ಅಪಘಾತದಲ್ಲಿ ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತಿರುಪತಿ ರೂವಾ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗಬಾಬು ಎಎನ್‌ಐಗೆ ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಅವರು ಹೇಳಿದ್ದಾರೆ.ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.