ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗುತ್ತೆ: ಗಡ್ಕರಿ

ನವದೆಹಲಿ:

             ಎಥೆನಾಲ್ ಘಟಕಗಳು ದೇಶದಲ್ಲಿ ಆರಂಭಗೊಂಡ ನಂತರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 55 ರೂ., ಡೀಸೆಲ್ 50 ರೂ. ಆಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಛತ್ತೀಸ್‍ಗಢದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಒಟ್ಟಾರೆ 5 ಎಥೆನಾಲ್ ಉತ್ಪಾದನಾ ಘಟಕಗಳನ್ನು ಕೇಂದ್ರ ಸರ್ಕಾರ ತೆರೆಯಲಿದ್ದು, ಇವುಗಳು ಕಾರ್ಯಾರಂಭ ಮಾಡಿದ ಬಳಿಕ ದೇಶದಲ್ಲಿ ತೈಲ ಬೆಲೆ ಇಳಿಕೆಯಾಗಲಿದೆ ಎಂದರು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

              ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಗಳಿಂದ ಘಟಕದಲ್ಲಿ ಇಂಧನವನ್ನು ಉತ್ಪತ್ತಿ ಮಾಡಲಾಗುತ್ತದೆ. ಭತ್ತ ಹಾಗೂ ಗೋಧಿಯ ಹುಲ್ಲು, ಕಬ್ಬು ಇನ್ನಿತರ ಕೃಷಿಯಿಂದ ಉತ್ಪತ್ತಿಯಾಗುವ ತ್ಯಾಜ್ಯಗಳನ್ನು ಬಳಸಿ ಇಂಧನ ಉತ್ಪತ್ತಿ ಮಾಡಬಹುದಾಗಿದೆ ಎಂದು ಹೇಳಿದರು. ಇದನ್ನೂ ಓದಿ: 1 ರೂ. ಟಿಕೆಟ್‍ಗೆ 17 ಕಿ.ಮೀ ಸಂಚಾರ – ಇದು ದನದ ಸೆಗಣಿಯಿಂದ ಓಡೋ ಬಸ್ ವಿಶೇಷತೆ

             ಎಥೆನಾಲ್, ಮೆಥೆನಾಲ್, ಬಯೋ ಇಂಧನ ಮತ್ತು ಸಿಎನ್‍ಜಿ ಬಳಕೆ ಹೆಚ್ಚಾದಂತೆ ಪೆಟ್ರೋಲ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಇದರಿಂದಾಗಿ ತೈಲ ಬೆಲೆ ಇಳಿಕೆಯಾಗಲಿದೆ. ಛತ್ತೀಸ್‍ಗಢದಲ್ಲಿ ತೆರೆಯಲಾದ ಜತ್ರೋಪಾ ಘಟಕದಿಂದ ಉತ್ಪಾದನೆಯಾದ ಜೈವಿಕ ಇಂಧನವನ್ನು ಬಳಸಿ ಇದೇ ಮೊದಲ ಬಾರಿಗೆ ದೇಶದಲ್ಲಿ ವಿಮಾನವನ್ನು ಹಾರಿಸಲಾಗಿದೆ ಎಂದು ಈ ವೇಳೆ ತಿಳಿಸಿದರು. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

              ನಾವು 8 ಲಕ್ಷ ಕೋಟಿ ರೂ. ಮೌಲ್ಯದ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಆಮದು ಮಾಡಿಕೊಳ್ಳುತ್ತಿದ್ದು, ತೈಲ ಬೆಲೆ ಮತ್ತಷ್ಟು ಏರಿಕೆಯಾಗುತ್ತಿದೆ. ಇದರಿಂದಾಗಿ ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ರೈತರು, ಆದಿವಾಸಿಗಳ ಸಹಾಯದಿಂದ ಎಥೆನಾಲ್, ಮೆಥೆನಾಲ್, ಬಯೋ- ಇಂಧನವನ್ನು ತಯಾರಿಸಬಹುದು. ಇವುಗಳನ್ನು ವಿಮಾನ ಹಾರಾಟಕ್ಕೂ ಬಳಸಬಹುದು

Recent Articles

spot_img

Related Stories

Share via
Copy link