ವರ್ಷದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ.

ಬೆಂಗಳೂರು : ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ, ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ನಿಗಮ ವತಿಯಿಂದ ನಿರ್ಮಿಸಿರುವ ಜಯನಗರ ಅಗ್ನಶಾಮಕ ಠಾಣೆ ನೂತನ ಕಟ್ಟಡವನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಉದ್ಘಾಟಿಸಿ ಮಾತನಾಡಿದರು, ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ, ರಾಜ್ಯ ಸರಕಾರ ಎಲ್ಲಾ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದರು.

ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರಕಾರ ವಿಶೇಷ ಆದ್ಯತೆ, ನೀಡುತ್ತದೆ, ಹಾಗೂ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ, ಎಂದೂ ಸಚಿವರು ತಿಳಿಸಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಮರ್ ಕುಮಾರ್ ಪಾಂಡೆ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Recent Articles

spot_img

Related Stories

Share via
Copy link
Powered by Social Snap