ಬೆಂಗಳೂರು:
ಕಮೀಷನ್ ಹೊಡೆಯುವ ಉದ್ದೇಶದಿಂದ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿ ನಾಟಕ ಮಾಡುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಬಿ ವೈ ವಿಜಯೇಂದ್ರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
◆ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಲ್ಲಿ ಮುಂದುವರೆಯಲು ಅವಕಾಶ.
◆ಫಾಜಿಲ್, ಮಸೂದ್, ಅಜರ್ ಹಾಗೂ ದೀಪಕ್ ರಾವ್ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ.
ಬಿಜೆಪಿ ಹಚ್ಚಿದ ದ್ವೇಷದ ಕಿಚ್ಚಿಗೆ ಬಲಿಯಾದ ಅಮಾಯಕರ ಕುಟುಂಬಗಳಿಗೆ ನ್ಯಾಯವನ್ನು ಸರಿದೂಗಿಸಿದ್ದೇವೆ.
ನಮ್ಮ ಸರ್ಕಾರ ಯಾವುದೇ ಬಗೆಯಲ್ಲಿ ಕಾನೂನು ಮೀರುವುದನ್ನು ಸಹಿಸುವುದಿಲ್ಲ,…
— Karnataka Congress (@INCKarnataka) June 17, 2023
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ. ಬಿಜೆಪಿ ಅವಧಿಯಲ್ಲಿ ಕೋಮು ಕಿಚ್ಚಿಗೆ ಬಲಿಯಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಇನ್ಮುಂದೆ ಕೋಮು ಕಲಹಕ್ಕೆ, ಪ್ರಚೋದನೆಗೆ ಯಾವುದೇ ಕಾರಣಕ್ಕೂ ಆಸ್ಪದ ನೀಡುವುದಿಲ್ಲ ಎಂದು ಟ್ವೀಟ್ ನಲ್ಲಿ ಹೇಳಿದೆ.
ಕಾಂಗ್ರೆಸ್ ಸರ್ಕಾರ ಕಮಿಷನ್ ಹೊಡೆಯುವ ಉದ್ದೇಶದಿಂದಲೇ ನೆರೆಯ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡುವ ನಾಟಕ ಆಡುತ್ತಿದೆ. ನಮ್ಮ ರಾಜ್ಯದ ರೈತರಿಂದಲೇ ಅಕ್ಕಿಯನ್ನು ಏಕೆ ಖರೀದಿಸಬಾರದು’ ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ