ವಿಶ್ವಕರ್ಮ ಜಯಂತಿ ಸೆ.17ರಂದು ಅದ್ಧೂರಿ ಆಚರಣೆ

ಬಳ್ಳಾರಿ:

ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರರಂದು ವಿಶ್ವಕರ್ಮ ಜಯಂತಿಯ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೆ.17 ರಂದು ಬೆಳಗ್ಗೆ 9.30ಕ್ಕೆ ಮುನ್ಸಿಪಾಲ್ ಕಾಲೇಜಿನ ಆವರಣದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಪೂಜೆ ಸಲ್ಲಿಸಿ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಲಿದ್ದು, ಮೆರವಣಿಗೆಯು ರಾಯಲ್ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆ ವೃತ್ತ, ಜೈನ್ ಮಾರ್ಕೆಟ್, ಹೆಚ್.ಆರ್.ಜಿ.ಗವಿಯಪ್ಪ ವೃತ್ತದ ಮುಖಾಂತರ ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ತಲುಪಲಿದೆ ಎಂದರು.

 ನಂತರ ಬೆಳಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಯೊಬ್ಬರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಮತ್ತು ಸುಗಮ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದ ಅವರು ಮಹಾನಗರಪಾಲಿಕೆ ಅಧಿಕಾರಿಗಳಿಗೆ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಸಂಬಂಧಿಸಿದ ಸಿದ್ಧತೆಗಳನ್ನು ಅಚ್ಟುಕಟ್ಟಾಗಿ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ವಿಶ್ವಕರ್ಮ ಸಮುದಾಯದ ಮುಖಂಡರು ಇದ್ದರು.

Recent Articles

spot_img

Related Stories

Share via
Copy link