ಹುಬ್ಬಳ್ಳಿ:
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಬೇಡಿಕೆಗಳ ಚರ್ಚೆಗಾಗಿಯೇ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತಿದೆ. ಈ ಕುರಿತಾದ ವಿಸ್ತ್ರತ ಚರ್ಚೆಗೆ ವಿಪಕ್ಷಗಳು ಸಹಕಾರ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭಾಗಕ್ಕೆ ಒತ್ತು ಕೊಡಬೇಕು ಎನ್ನುವ ಕಾರಣಕ್ಕಾಗಿಯೇ ಬೆಳಗಾವಿಯ ಸುವರ್ಣ ಸೌಧ ನಿರ್ಮಿಸಲಾಗಿದೆ. ಚಳಿಗಾಲದ ಅಧಿವೇಶನವನ್ನು ಇಲ್ಲಿಯೇ ಮಾಡಲಾಗುತ್ತಿದೆ. ಈ ಭಾಗದ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲು ವಿಪಕ್ಷದವರ ಸಹಕಾರ ಮುಖ್ಯ ಎಂದರು.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಿಡಬ್ಲೂಸಿ ಸಭೆಗಾಗಿ ದೆಹಲಿಗೆ ಹೋಗಿದ್ದಾರೆ. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಲು ಹೋಗಿದ್ದಲ್ಲ. ಈ ಕುರಿತು ಯಾವುದೇ ಚರ್ಚೆಗಳು ಆಗಿಲ್ಲ. ಸಚಿವ ಸಂಪುಟ ಪುನಾರಚನೆ ವಿಷಯ ನನಗೆ ಗೊತ್ತಿಲ್ಲ. ಈ ವಿಷಯ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಸಂಪುಟ ಪನರಾಚನೆ ಕುರಿತು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿ ಅದನ್ನ ತೀರ್ಮಾನ ಮಾಡಬೇಕು ಎಂದು ಸ್ಪಷ್ಟಪಡಿಸಿದರು.
ದೇಶದ ಪ್ರತಿಯೊಬ್ಬ ನಾಗರಿಕನಿಗೆ ಮತದಾನದ ಹಕ್ಕು ಕೊಟ್ಟಿದ್ದು ಸಂವಿಧಾನ. ಚಂದ್ರಶೇಖರ ಗುರೂಜಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಸ್ವಾಮೀಜಿ ದೊಡ್ಡವರು, ಅವರ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ ಎಂದರು.