ಬೆಂಗಳೂರು:
ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ ವಿವಾದಿತ ಎಪಿಎಂಸಿ ಕಾಯ್ದೆ ರದ್ದು ಸೇರಿದಂತೆ ಹಲವು ಮಹತ್ವದ ಪ್ರಸ್ತಾವನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲು ನಿರ್ಧರಿಸಲಾಗಿದೆ.
ಇನ್ನು ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ಕಾಯ್ದೆಯನ್ನು ರದ್ದು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಹಳೆ ಎಪಿಎಂಸಿ ಕಾಯ್ದೆಯನ್ನೆ ಮರುಜಾರಿಗೊಳಿಸುವ ತೀರ್ಮಾನಕ್ಕೆ ಕಾಂಗ್ರೆಸ್ ಸರ್ಕಾರ ಬಂದಿದೆ.
ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನಸೌಧದಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಎಪಿಎಂಸಿ ತಿದ್ದುಪಡಿ ಕಾಯ್ದೆಯಿಂದ 1 ಲಕ್ಷ ರೈತ ಕುಟುಂಬಗಳಿಗೆ ಸಮಸ್ಯೆಯಾಗಿದೆ. ರಾಜ್ಯದಲ್ಲಿ ಮಾರುಕಟ್ಟೆ ಕೂಡ ಗಣನೀಯವಾಗಿ ಕಡಿಮೆಯಾಗಿದೆ. ತಿದ್ದುಪಡಿ ಕಾಯ್ದೆ ಜಾರಿ ನಂತರ ವ್ಯವಹಾರ 570 ಕೋಟಿಯಿಂದ 200 ಕೋಟಿಗೆ ಕುಸಿದಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
