ಶಾಸಕರಿಗೆ ಸಿದ್ದರಾಮಯ್ಯರಿಂದ ಖಡಕ್‌ ಸೂಚನೆ…!

ಬೆಂಗಳೂರು

     ರಾಜ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್‌ ಪಕ್ಷವೂ ಸರ್ಕಾರ ರಚನೆಯ ಬಳಿಕ ಹೆಚ್ಚು ಸಕ್ರಿಯವಾಗಿದ್ದು, 2024 ರ ಚುನಾವಣೆ ಹಿನ್ನಲೆ ಪಕ್ಷವನ್ನ ಹೆಚ್ಚು ಬಲಪಟಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಾಸಕರಿಗೆ ಖಡಕ್‌ ಸೂಚನೆಯನ್ನ ನೀಡಿದ್ದಾರೆ.

     ಬುಧವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಖಡಕ ಸೂಚನೆಯನ್ನ ನೀಡಿದ್ದಾರೆ. 135 ಸ್ಥಾನಗಳನ್ನ ಗಳಿಸಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಯಲ್ಲೂ ಸಹ ಪಕ್ಷ ಸಂಘಟನೆಗೆ ಶ್ರಮವಹಿಸಿ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ. 

     ವಿಧಾನಸಭೆ ಅಧಿವೇಶನದಲ್ಲಿ ಕಡ್ಡಾಯವಾಗಿ ಹೆಚ್ಚು ಕ್ರಿಯಾಶೀಲತೆಯಿಂದ ಭಾಗವಹಿಸಿ

 * ಕೇಂದ್ರದ ತಾರತಮ್ಯ ನೀತಿಯಿಂದ ರಾಜ್ಯದ ಜನತೆಗೆ ಅಪಾರ ನಷ್ಟವಾಗಿದೆ. ಹಣಕಾಸು ಆಯೋಗದಲ್ಲೂ ನಮಗೆ ಅನ್ಯಾಯವಾಗಿದೆ. ತೆರಿಗೆ ಪಾಲಿನಲ್ಲೂ ಅನ್ಯಾಯವಾಗಿದೆ.

  * ನಮ್ಮ ನಾಡಿನ‌ ಜನತೆ ಕಟ್ಡುವ ತೆರಿಗೆಯಲ್ಲಿ ನಮ್ಮ ಪಾಲು ಸಮರ್ಪಕವಾಗಿ ಬರುತ್ತಿಲ್ಲ. ನಾವು ಕ್ರಿಯಾಶೀಲ ಒತ್ತಡ ಮತ್ತು ಬೇಡಿಕೆ ಮೂಲಕ ನಮ್ಮ ಪಾಲನ್ನು ನಾವು ಪಡೆದುಕೊಳ್ಳಬೇಕು. * ಕೇಂದ್ರದಿಂದ ರಾಜ್ಯಕ್ಕೆ, ನಾಡಿನ ಜನತೆಗೆ ಅನ್ಯಾಯ ಆಗುತ್ತಿದ್ದರೂ ರಾಜ್ಯದಿಂದ ಆಯ್ಕೆ ಆದ ಸಂಸದರು ನಾಲ್ಕೂವರೆ ವರ್ಷಗಳ ಕಾಲ ನಾಡಿನ ಜನತೆಯ ಪರವಾಗಿ ಬಾಯಿ ಬಿಡಲಿಲ್ಲ.

   ಇದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಕೋವಿಡ್, ಪ್ರವಾಹದ ಸಂದರ್ಭದಲ್ಲೂ ಈ ಸಂಸದರು ರಾಜ್ಯದ ಪರವಾಗಿ ಕೇಂದ್ರದ ಮುಂದೆ ಬಾಯಿ ಬಿಡಲಿಲ್ಲ. ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ಸರಿಯಾದ ಉತ್ತರ ಕೊಡಬೇಕು. * ಹೀಗಾಗಿ ಬರಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಜನಪರವಾಗಿ ಕೆಲಸ ಮಾಡಿ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap