ಶಿಕ್ಷಕರ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಶಿಕ್ಷಕರ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಿರುವ ನಾಲ್ಕು ಜನ ನೂತನ ವಿಧಾನ ಪರಿಷತ್ ಸದಸ್ಯರುಗಳು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಬಸವರಾಜ್ ಹೊರಟ್ಟಿ , ಪ್ರಕಾಶ್ ಹುಕ್ಕೇರಿ , ಹನುಮಂತ ನಿರಾಣಿ, ಮಧು ಮಾದೇಗೌಡ ಅವರು ಪರಿಷತ್ತಿನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಈ ವೇಳೆ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಿ ಸದಸ್ಯರ ಪರವಾಗಿ ಘೋಷಣೆ ಕೂಗುತ್ತ, ಹೂಗುಚ್ಛ ನೀಡಿ ಹಾರ ಹಾಕಿ ಗೌರವಿಸಿದರು. ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಪ್ರಮಾಣವಚನ ಬೋಧಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ಹಂಗಾಮಿ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ, ಸಚಿವ ಹಾಲಪ್ಪ ಆಚಾರ್, ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪ್ರತಿಪಕ್ಷ ಸಚೇತಕ ಪ್ರಕಾಶ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.

ಮಂಡ್ಯ ವಿಧಾನ ಪರಿಷತ್ತು ಕ್ಷೇತ್ರದಿಂದ ಆಯ್ಕೆಯಾಗಿರುವ ಮಧು ಜಿ. ಮಾದೇಗೌಡ ತಮ್ಮ ತಂದೆ ಜಿ. ಮಾದೇಗೌಡ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬಸವರಾಜ ಹೊರಟ್ಟಿ ತಮ್ಮ ತಂದೆ ಮತ್ತು ತಾಯಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

Recent Articles

spot_img

Related Stories

Share via
Copy link
Powered by Social Snap