ಶಿರಾ ತಾ|| ಮಟ್ಟದ ಪ.ಪೂ. ಕಾಲೇಜುಗಳ ಕ್ರೀಡಾಕೂಟ

0
22

ಶಿರಾ:

            2018-19ನೇ ಸಾಲಿನ ತಾಲ್ಲೂಕು ಮಟ್ಟದ ಪ.ಪೂ. ಕಾಲೇಜುಗಳ ಕ್ರೀಡಾಕೂಟವು ಸೆ:18 ಮತ್ತು 19 ರಂದು ನಡೆಯಲಿದೆ.
             ಪ.ಪೂ. ಶಿಕ್ಷಣ ಇಲಾಖೆ, ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು, ಜ್ಞಾನಜ್ಯೋತಿ ಪ.ಪೂ. ಕಾಲೇಜು ಬರಗೂರು ಇವರ ಸಂಯುಕ್ತಾಶ್ರಯದಲ್ಲಿ ಪ.ನಾ.ಹಳ್ಳಿಯ ಶಾಂತಿನಿಕೇತನ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ.ಶಾಸಕ ಬಿ.ಸತ್ಯನಾರಾಯಣ್ ಕ್ರೀಡಾಕೂಟದ ಉದ್ಘಾಟನೆ ಮಾಡಲಿದ್ದು ಜಿ.ಪಂ. ಅಧ್ಯಕ್ಷೆ ಶ್ರೀಮತಿ ಲತಾ ರವಿಕುಮಾರ್ ದ್ವಜಾರೋಹಣ ಮಾಡುವರು. ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ನಾಗರತ್ನಮ್ಮ ಅಧ್ಯಕ್ಷತೆ ವಹಿಸಲಿದ್ದು ತಾ.ಪಂ. ಅಧ್ಯಕ್ಷೆ ಶ್ರೀಮತಿ ಹಂಸವೇಣಿ ಶ್ರೀನಿವಾಸ್ ಕ್ರೀಡಾ ತಂಡಗಳ ಪರಿಚಯ ಮಾಡುವರು. 

               ಗ್ರಾ.ಪಂ. ಅಧ್ಯಕ್ಷೆ ಭಾಗ್ಯಮ್ಮ ಚಂದ್ರಶೇಖರ್ ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು. ನಗರಸಭಾಧ್ಯಕ್ಷ ಅಮಾನುಲ್ಲಾಖಾನ್, ಬಿ.ಇ.ಓ. ವಿಜಯ್‍ಕುಮಾರ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸುವರು

LEAVE A REPLY

Please enter your comment!
Please enter your name here