ಮುಂಬೈ:
ಕರ್ನಾಟಕ ಮೂಲದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮನೆಯಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕಳೆದ ವಾರ ಜುಹುದಲ್ಲಿರುವ ನಟಿಯ ನಿವಾಸದಿಂದ ಕೆಲವು ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.ದೂರಿನ ಆಧಾರದ ಮೇಲೆ ಜುಹು ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ತನಿಖಾ ತಂಡವು ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.