ಶಿವಮೊಗ್ಗ:
ಅಣಬೆ ಸಾಂಬಾರು ಸೇವಿಸಿ ಐವರು ಮಕ್ಕಳು ಅಸ್ವಸ್ಥರಾದ ಘಟನೆ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದಲ್ಲಿ ಬೆಳೆದಿದ್ದ ಅಣಬೆ ಕಿತ್ತು ತಂದು ಸಾಂಬಾರು ಮಾಡಲಾಗಿತ್ತು. ಇದನ್ನು ಮಧ್ಯಾಹ್ನ ಊಟದೊಂದಿಗೆ ತಿಂದ ಐವರು ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಶಿಕಾರಿಪುರ ಆಸ್ಪತ್ರೆಗೆ ಕಳುಹಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು.