ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌

ಬೆಂಗಳೂರು:

ಇಂದಿನಿಂದ ಶೈಕ್ಷಣಿಕ ವರ್ಷ ಆರಂಭಗೊಳ್ಳುತ್ತಿದ್ದು, ಶಾಲೆಗಳಿಗೆ ಆಗಮಿಸಲಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಶುಭ ಕೋರಿದ್ದಾರೆ.
ಶೀಘ್ರದಲ್ಲಿ ಪಠ್ಯಪುಸ್ತಕ, ಸಮವಸ್ತ್ರದ ಜೊತೆ ಸೈಕಲ್ ವಿತರಣೆ ಮಾಡುವ ಭರವಸೆ ನೀಡಿದ್ದಾರೆ. ಆರ್.ಟಿ.ನಗರದಲ್ಲಿನ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳ ನಂತರ ಶಾಲೆ ಆರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಮಕ್ಕಳಿಗೆ ಒಳ್ಳೆಯ ವಾತಾವರಣ ನಿರ್ಮಾಣವಾಗಲಿ ಎನ್ನುವ ಆಶಯ ನಮ್ಮದು. ಶಾಲೆಯಲ್ಲಿಯೇ ಕಲಿತಾಗ ಮಕ್ಕಳಿಗೆ ಒಳ್ಳೆಯ ಪರಿಣಾಮ ಆಗುತ್ತದೆ ಎಂದರು.

ಬಿಸಿಯೂಟ ಆರಂಭ: ಕೋವಿಡ್ ಕಾರಣಕ್ಕೆ ಇಷ್ಟು ದಿನ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿ ಊಟಕ್ಕೆ ಶಾಲೆಯಲ್ಲಿ ಕಡಿವಾಣ ಹಾಕಿ ದವಸ, ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿತ್ತು. ‌
ಆದರೆ, ಇಂದಿನಿಂದ ಬಿಸಿಯೂಟವನ್ನು ಆರಂಭಿಸಲು ತಿಳಿಸಲಾಗಿದೆ. ಹಾಗೆಯೇ ಶಾಲಾ ಪ್ರಾರಂಭೋತ್ಸವಕ್ಕೆ ಪೋಷಕರನ್ನೂ ಆಹ್ವಾನಿಸಲು ತಿಳಿಸಿದ್ದು, ಕಲಿಕಾ ಚೇತರಿಕೆ ವಿಶೇಷ ಕಾರ್ಯಕ್ರಮ ಕೂಡ ಶುರುವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap