ಸಚಿವ ಸಂಪುಟದ ಸಭೆ ಬಳಿಕ ಬರಪೀಡಿತ ತಾಲ್ಲೂಕುಗಳ ಘೋಷಣೆ : ಸಿಎಂ

ಬೆಂಗಳೂರು :

     ಮುಂದಿನ ಸಚಿವ ಸಂಪುಟದ ಸಭೆ ಬಳಿಕ ರಾಜ್ಯದ ಬರಪೀಡಿತ ತಾಲ್ಲೂಕುಗಳು ಘೋಷಣೆಯಾಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬುಧವಾರ ಬರ ಪೀಡಿತ ತಾಲ್ಲೂಕುಗಳ ಪರಿಸ್ಥಿತಿ ಕುರಿತು ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ಸಅಭೆ ನಡೆಯಲಿದ್ದು, ನಂತರ ಸಂಪುಟ ಸಭೆ ನಿಗದಿಯಾಗಲಿದೆ.

     ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದ 62 ತಾಲ್ಲಕುಗಳು ಪೂರ್ಣವಾಗಿ ಬರಪೀಡಿತ ನಿಯಮಗಳ ಒಳಗೆ ಬರಲಿವೆ. ಇನ್ನೂ 136 ತಾಲ್ಲಕುಗಳ ವರದಿಗಳನ್ನು ಕೇಳಲಾಗಿದೆ. ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಬರಪೀಡಿತ ತಾಲ್ಲಕುಗಳನ್ನು ಘೋಷಣೆ ಮಾಡಲಾಗುವುದು ಎಂದರು.

    ಸಂಕಷ್ಟ ಸೂತ್ರದ ಅನ್ವಯ ಹಾಗೂ ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶದಂತೆ ತಮಿಳುನಾಡಿಗೆ ನೀರು ಬಿಡಲಾಗಿದೆ. ಸರ್ವೋಚ್ಛ ನ್ಯಾಯಾಲಯದ ಮುಂದಿನ ವಿಚಾರಣೆಯಲ್ಲಿ ನಮ್ಮ ರಾಜ್ಯದ ಜಲಾಶಯಗಳ ವಾಸ್ತವಿಕತೆಯನ್ನು ತಿಳಿಸಲಾಗುವುದು. ಯಾವುದೇ ಕಾರಣಕ್ಕೂ ಕರ್ನಾಟಕದ ರೈತರ ಹಿತಕ್ಕೆ ವಿರುದ್ದವಾಗಿ ರಾಜಕಾರಣ ಮಾಡುವುದಿಲ್ಲ.

      ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ಉಚಿತವಾಗಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಬಸ್, ಆಟೋ ಚಾಲಕರು, ಖಾಸಗಿ ವಾಹನ ಮಾಲೀಕರು, ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಬಸ್ ಮಾಲೀಕರ ಬೇಡಿಕೆಯಂತೆ ಅವರ ನಷ್ಟ ತುಂಬಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap