ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು…!

ಬೆಂಗಳೂರು:

    ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯ ಸರ್ಕಾರದ ಅಧಿಕಾರಿಗಳ ಜೊತೆ ಅಧಿಕೃತ ಸಭೆಗೆ ಹಾಜರಾಗಿದ್ದಾರೆ ಎಂಬ ಆರೋಪದ ವಿರುದ್ಧ ಪಕ್ಷವು ನೀಡಿರುವ ದೂರನ್ನು ಪರಿಶೀಲಿಸುವುದಾಗಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಆರ್ ಅಶೋಕ ಬುಧವಾರ ಹೇಳಿದ್ದಾರೆ.

   ದೂರು ನೀಡಿದ ಬಳಿಕ ರಾಜಭವನದಲ್ಲಿ ಮಾತನಾಡಿದ ಮಾಜಿ ಸಚಿವ ಆರ್. ಅಶೋಕ್,  ನರೇಂದ್ರ ಮೋದಿ, ಅಮಿತ್ ಶಾ ಅವರು ಹೇಳಿದಂತೆ ‘10, ಜನಪಥವು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹೊರಟಿದೆ’ ಎಂದು ಆರೋಪಿಸಿದರು. ಮುಖ್ಯ ಕುರ್ಚಿಯಲ್ಲಿ ಕುಳಿತು ಅಧಿಕಾರಿಗಳಿಗೆ ಸುರ್ಜೇವಾಲಾ ಸೂಚನೆ ಕೊಟ್ಟಿದ್ದಾರೆ. 28 ಶಾಸಕರು, 4 ಸಂಸದರಿಗೆ ಬೆಲೆ ಇಲ್ಲವೇ? ಎಂದು ಕೇಳಿದರು. ಇದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು. ಈ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ವಿವರ ನೀಡಿದರು.

    ಸಚಿವರು, ಬಿಬಿಎಂಪಿ ಅಧಿಕಾರಿಗಳಿದ್ದ ಸಭೆಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗಿಯಾಗಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಮಾಜಿ ಸಚಿವ ಆರ್​.ಅಶೋಕ್​ ನೇತೃತ್ವದಲ್ಲಿ ರಾಜಭವನಕ್ಕೆ ಆಗಮಿಸಿದ ಬಿಜೆಪಿ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದೆ.

   ಬೆಂಗಳೂರಲ್ಲಿ ಅನೇಕ ಸಂಸರದರು ಇದ್ದಾರೆ. ಇವರಲ್ಲಿ ಯಾರನ್ನು ಸಭೆಗೆ ಕರೆಯದೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಸಭೆಗೆ ಕರೆದಿದೆ. ಇದರಿಂದ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ಕಚೇರಿ ಮಾಡಲು ಸರ್ಕಾರ ಹೊರಟಿದೆ.  ​ಅಧಿಕಾರದ ಮದದಿಂದ ಈ ರೀತಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಸಭೆಯಲ್ಲಿ ಸುರ್ಜೇವಾಲ ಅವರು ಕುಳಿತ್ತಿದ್ದರು ಪರವಾಗಿಲ್ಲ. ಆದ್ರೆ ಮೇನ್ ಚೇರ್​ನಲ್ಲಿ ಕೂರಿಸಿ ಯಾರು ತಪ್ಪು ಮಾಡಿದ್ದಾರೆ. ಅವರಿಗೆ ಶಿಕ್ಷೆಯಾಗಬೇಕು. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು ರಾಜ್ಯಪಾಲರು ದೂರನ್ನು ಸ್ವೀಕಾರ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap