ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುವರ್ಣ ಮಹೋತ್ಸವ

ಚಳ್ಳಕೆರೆ

      ಕಳೆದ ಸುಮಾರು 50 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶೀಘ್ರದಲ್ಲೇ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುವತ್ತ ಹೆಜ್ಜೆ ಇಟ್ಟಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಹೆಸರನ್ನು ಗಳಿಸಿದ ಕೀರ್ತಿ ಈ ಕಾಲೇಜಿನದ್ದು, ಸುವರ್ಣ ಮಹೋತ್ಸವದ ಅಂಗವಾಗಿ ಹಳೇಯ ಕಾಲೇಜು ಕಟ್ಟವನ್ನು ಆಧುನಿಕ ತಂತ್ರಜ್ಞಾನಗಳೊಂದಿಗೆ ಪುನರ್ ನಿರ್ಮಿಸುವ ಯೋಜನೆ ಇದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

      ಅವರು, ಶನಿವಾರ ಇಲ್ಲಿನ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಕಾಲೇಜಿನ ಹಲವಾರು ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕøತಿಕ, ಕ್ರೀಡಾ, ಎನ್‍ಎಸ್‍ಎಸ್ ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್ ಕ್ರಾಸ್ ಘಟಕಗಳ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳ ಕಾರ್ಯಗಾರವನ್ನು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      ಕಳೆದ ಹಲವಾರು ವರ್ಷಗಳಿಂದ ಕಾಲೇಜಿನ ಹಲವಾರು ಯೋಜನೆಗಳಿಗೆ ತಮ್ಮ ಅನುದಾನದಲ್ಲಿ ಆರ್ಥಿಕ ನೆರವು ನೀಡಿದ್ದು, ಇದರ ಪೂರ್ಣ ಪ್ರಮಾಣದ ಪ್ರಯೋಜನವನ್ನು ಕಾಲೇಜು ವಿದ್ಯಾರ್ಥಿಗಳು ಪಡೆಯುತ್ತಿದ್ದು, ನನಗೆ ಸಂತಸ ತಂದಿದೆ. ಈಗ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ್ದು ಎಲ್ಲಾ ರೀತಿಯ ಸಹಕಾರವನ್ನು ನೀಡುವ ಭರವಸೆ ಅವರು ನೀಡಿದರು.

       ವಿಶೇಷ ಉಪನ್ಯಾಸ ನೀಡಿದ ಕನ್ನಡ ಪ್ರಾಧ್ಯಾಪಕ ಡಾ.ಎಚ್.ಎನ್.ಮಲ್ಲೇಶ್‍ಗೌಡ, ಪ್ರತಿವರ್ಷ ಫಲಿತಾಂಶ ಹಾಗೂ ವಿದ್ಯಾರ್ಥಿಗಳು ಪಡೆಯುವ ಅಂಕಗಳಲ್ಲಿ ಬಾರಿ ಬದಲಾವಣೆಯನ್ನು ನಾವು ಕಾಣುತ್ತಿದ್ದೇವೆ. ಫಲಿತಾಂಶಗಳು ಹೆಚ್ಚಿನ ಮಹತ್ವವನ್ನು ಪಡೆಯುವಲ್ಲಿ ಸಫಲವಾದರೂ ಶೈಕ್ಷಣಿಕ ಮೌಲ್ಯ ಕಡಿಮೆಯಾಗುತ್ತಿದೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳೇ ಅತಿ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ ನೀಡುವಲ್ಲಿ ಸಾಧ್ಯವಾಗುತ್ತಿಲ್ಲ. ಶಿಕ್ಷಣ ಇಂದು ಯಾಂತ್ರಿಕೃತವಾಗುತ್ತಿದೆ ಹೊರತು ಮೌಲ್ಯಾಧರಿತವಾಗುತ್ತಿಲ್ಲ. ಪ್ರತಿಯೊಬ್ಬ ಶಿಕ್ಷಕನೂ ಸಹ ಶಿಕ್ಷಣ ಇಲಾಖೆಯ ಮೌಲ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಲ್ಲೂ ಸಹ ಜ್ಞಾನದ ಮೌಲ್ಯವನ್ನು ಹೆಚ್ಚಿಸುವಲ್ಲಿ ಸದಾಕಾರ್ಯನಿರ್ವಹಿಸುತ್ತಾನೆ. ಆದರೆ, ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಕಡಿಮೆಯಾಗುತ್ತಿರುವುದು ಅಪಾಯಕಾರಿ ಸಂಗತಿಯಾಗಿದೆ ಎಂದರು.

      ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ಪ್ರೊ.ಜಿ.ವೆಂಕಟೇಶ್, ಹಳೇಯ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದು 5 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡುವ ಯೋಜನೆ ಇದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗ್ರಂಥಾಲಯದ ಜೊತೆಗೆ ವಾಚನಾಲಯ ವ್ಯವಸ್ಥೆಯನ್ನು ಸಹ ಆಗಬೇಕಿದೆ. ಕಾಲೇಜಿನ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಎಸ್ಸಿ ಮತ್ತು ಎಸ್ಟಿ ಹಾಸ್ಟಲ್ ಕಟ್ಟಡ ಕಾಮಗಾರಿ ಅಪೂರ್ಣವಾಗಿದ್ದು, ಅವುಗಳನ್ನು ಪೂರೈಸಬೇಕಿದೆ. ಯುಜಿ ಮತ್ತು ಪಿಜಿ ಸೌಕರ್ಯವಿರುವ ಈ ಕಾಲೇಜು ವಿಶ್ವವಿದ್ಯಾಲಯವಾಗುವ ಎಲ್ಲಾ ಆರ್ಹತೆಗಳನ್ನು ಹೊಂದಿದೆ ಎಂದರು.

        ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಪಿ.ಪ್ರಕಾಶ್‍ಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸಿ.ವಿ.ತ್ಯಾಗರಾಜು, ಗೋಪಾಲನಾಯ್ಕ, ಕುಶಾಲಪ್ಪ, ಶಾಂತಕುಮಾರ್, ಎಚ್.ವಿ.ಕೃಷ್ಣಮೂರ್ತಿ, ಪ್ರಾಧ್ಯಾಪಕಿ ಶಾಂತವೀರಮ್ಮ, ನಗರಸಭಾ ಸದಸ್ಯ ಜಿ.ಮಲ್ಲಿಕಾರ್ಜುನ, ಅತಿಕುರ್ ರೆಹಮಾನ್, ಎಸ್.ಮುಜೀಬ್, ಆರ್.ಪ್ರಸನ್ನಕುಮಾರ್, ರೆಡ್ಡಿಹಳ್ಳಿ ಶಿವಣ್ಣ, ಬಿ.ಎಸ್.ಮಂಜುನಾಥ, ಮಂಜುನಾಥರೆಡ್ಡಿ, ಎಂ.ಶಿವಲಿಂಗಪ್ಪ, ಕೆ.ಲೀಲಾವತಿ, ರಾಜೇಶ್ವರಿಪೂಜಾರ್, ಡಾ.ಕವಿತಾ, ಎನ್.ಜಗನ್ನಾಥ, ಡಾ.ಕೆ.ಚಿತ್ತಯ್ಯ, ಜೆ.ನಾಗಭೂಷಣ್, ಎಸ್.ಬಿ.ಶಿವಪ್ರಸಾದ್, ಸಿ.ಜಗದೀಶ್, ರಘುನಾಥ ಮುಂತಾದವರು ಭಾಗವಹಿಸುವರು.

                 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link