ಕೋಲಾರ :
ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಶಾಲೆ ಕೊಠಡಿಯಲ್ಲಿ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ ಅವರನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜೇಶ್ವರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಲು ಪಟ್ಟಣದ ಬಳೆ ಚಂಗಪ್ಪ ಸರ್ಕಾರಿ ಶಾಲೆ ಕೊಠಡಿಯಲ್ಲಿ ಜನವರಿ 21 ರಂದು ವಿದ್ಯಾರ್ಥಿಗಳು ನಮಾಜ್ ಮಾಡಿದ್ದರು. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ