ನವದೆಹಲಿ:
ಖರ್ಗೆ ಅವರ ನಿವಾಸಕ್ಕೆ ತೆರಳಿದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಖ್ಯಸ್ಥರೊಂದಿಗೆ ಗುಪ್ತವಾಗಿ ಸಭೆ ನಡೆಸಿದರು.ಕರ್ನಾಟಕದಲ್ಲಿ ಪಕ್ಷದ ವ್ಯವಹಾರಗಳ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.
ಕರ್ನಾಟಕದ ಪಕ್ಷದ ನಾಯಕರು ಮತ್ತು ಭಾನುವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಮೇಲ್ವಿಚಾರಣೆಗಾಗಿ ಅವರು ನೇಮಿಸಿದ ಮೂವರು ವೀಕ್ಷಕರೊಂದಿಗೂ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆ ನಡೆಸಿದ್ದಾರೆ.