ಬೆಂಗಳೂರು:
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಲೋಕ್ ಮೋಹನ್ ರೇಸ್ ನಲ್ಲಿದ್ದಾರೆ.
ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಮುಂದಿನ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಅಲೋಕ್ ಮೋಹನ್ 1987 ರ ಬ್ಯಾಚ್ ನ ಹಿರಿಯ IPS ಅಧಿಕಾರಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸರಲ್ಲೂ ಸಿಬ್ಬಂದಿ ಬದಲಾವಣೆ ನಡೆಯಲಿದೆ. 1991 ರ ಬ್ಯಾಚ್ನ ಈಗಿನ ಪೊಲೀಸ್ ಕಮಿಷನರ್.
ಸಂಚಾರ ವಿಭಾಗದ ಎಂಎ ಸಲೀಂ ಅವರನ್ನು ಹಿರಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ನೇಮಿಸುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ. ಸಲೀಂ ಅವರು 1993 ರ ಐಪಿಎಸ್ ಬ್ಯಾಚ್ಗೆ ಸೇರಿದ್ದಾರೆ. ಪ್ರವೀಣ್ ಸೂದ್ ಅವರ ಹುದ್ದೆ ತೆರವಾದ ನಂತರ ಉಂಟಾಗುವ ಖಾಲಿ ಹುದ್ದೆಗಳಿಂದಾಗಿ ಡಿಜಿಪಿ ಶ್ರೇಣಿಗೆ ಬಡ್ತಿ ಪಡೆಯುವ ಸಾಲಿನಲ್ಲಿ ಮುಂದಿನ ಸ್ಥಾನದಲ್ಲಿದ್ದಾರೆ.
ಸೇವಾ ಜೇಷ್ಠತೆ ಆಧಾರದಲ್ಲಿ ಡಾ. ಅಲೋಕ್ ಮೋಹನ್ ಅವರನ್ನೇ ಸರಕಾರ ಡಿಜಿ-ಐಜಿ ಹುದ್ದೆಗೆ ಪರಿಗಣಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಅವರ ನಂತರದ ಸ್ಥಾನದಲ್ಲಿ ರವೀಂದ್ರನಾಥ್, ಕಮಲ್ಪಂತ್, ಪ್ರತಾಪ್ರೆಡ್ಡಿ ಇದ್ದಾರೆ. ನಾಲ್ವರು ಅಧಿಕಾರಿಗಳ ಸೇವಾ ಜೇಷ್ಠತೆ, ಕಾರ್ಯವೈಖರಿ, ಸೇವಾ ಅನುಭವ ಆಧರಿಸಿ ಒಬ್ಬರ ಹೆಸರನ್ನು ಸರಕಾರ ಅಂತಿಮಗೊಳಿಸಲಿದೆ.
ಆಂಧ್ರ ಮೂಲದ ಡಾ.ಪಿ. ರವೀಂದ್ರನಾಥ್, 1990ರ ಬ್ಯಾಚ್ನ ಐಪಿಎಸ್ ಅಧಿಕಾರಿ. 33 ವರ್ಷಗಳ ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಹಾಲಿ ತರಬೇತಿ ವಿಭಾಗದ ಡಿಜಿಪಿಯಾಗಿದ್ದಾರೆ. ಈ ವರ್ಷ ಸೆಪ್ಟೆಂಬರ್ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದು, ಅಲೋಕ್ ಮೋಹನ್ ನಂತರದ ಸ್ಥಾನದಲ್ಲಿ ಡಿಜಿ-ಐಜಿ ಹುದ್ದೆಯ ರೇಸ್ನಲ್ಲಿದ್ದಾರೆ.
ಕರ್ನಾಟಕ ಡಿಜಿ-ಐಜಿ ಹುದ್ದೆಗೆ ನಾಲ್ವರು ಹಿರಿಯ ಐಪಿಎಸ್ ಅಧಿಕಾರಿಗಳು ರೇಸ್ನಲ್ಲಿದ್ದಾರೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್, ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್, ನೇಮಕಾತಿ ವಿಭಾಗದ ಡಿಜಿಪಿ ಕಮಲ್ಪಂತ್, ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ಹೆಸರು ಕೇಳಿಬಂದಿವೆ. ಪ್ರವೀಣ್ ಸೂದ್ ಮೇ 25ರೊಳಗೆ ಸಿಬಿಐ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ನಡುವಣ ಅವಧಿಯಲ್ಲಿಯೇ ನೂತನ ಸರಕಾರ ಸೂದ್ ಅವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಯನ್ನು ನೇಮಕಗೊಳಿಸಬೇಕಿದೆ.
ಮುಂದಿನ ಡಿಜಿ ಮತ್ತು ಐಜಿಪಿ ನೇಮಕಕ್ಕೆ ಸಂಬಂಧಿಸಿದಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿ ಮತ್ತು ಎಆರ್) 30 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ . ಉತ್ತಮ ಹಿನ್ನೆಲೆ ಹೊಂದಿರುವ ಅಧಿಕಾರಿಗಳ ವಾರ್ಷಿಕ ಗೌಪ್ಯ ವರದಿಗಳನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ ಕಳುಹಿಸುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ