ಕೊಚ್ಚಿ:
ಗಾಡ್ಫಾದರ್’, ‘ಕಾಬೂಲಿವಾಲಾ’ ಸೇರಿದಂತೆ ಅನೇಕ ಸೂಪರ್ ಹಿಟ್ ಸಿನಿಮಾ ನಿರ್ದೇಶನ ಮಾಡಿದ ಸಿದ್ಧಿಕಿ ಅವರಿಗೆ ಸೋಮವಾರ ಹೃದಯಾಘಾತ ಆಗಿತ್ತು, ನಿನ್ನೆ ರಾತ್ರಿ 9.10ಕ್ಕೆ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳು ಇದ್ದಾರೆ.
ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಅವರು ಸುಮಾರು ಒಂದು ತಿಂಗಳಿನಿಂದ ಅಮೃತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಹೃದಯಾಘಾತವಾಗಿತ್ತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
1986ರಲ್ಲಿ ತೆರೆಕಂಡ ‘ಪಪ್ಪನ್ ಪ್ರಿಯಪ್ಪೆತ್ತ ಪಪ್ಪನ್’ ಸಿನಿಮಾಗೆ ಚಿತ್ರಕತೆ ಬರೆಯುವುದರೊಂದಿಗೆ ಸಿನಿ ಪಯಣ ಆರಂಭಿಸಿದ ಸಿದ್ಧಿಕಿ, 1989ರಲ್ಲಿ ಬಿಡುಗಡೆಯಾದ ‘ರಾಮ್ಜಿ ರಾವ್ ಸ್ಪೀಕಿಂಗ್’ ಸಿನಿಮಾ ಮೂಲಕ ನಿರ್ದೇಶಕರಾದರು. ಅವರು ನಿರ್ದೇಶನ ಮಾಡಿರುವ ಕೊನೇ ಸಿನಿಮಾ ‘ಬಿಗ್ ಬ್ರದರ್’ 2020ರಲ್ಲಿ ಬಿಡುಗಡೆಯಾಗಿದೆ. ಮಲಯಾಳಂ ಮಾತ್ರವಲ್ಲದೆ ತಮಿಳು, ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು.