ತುಮಕೂರು

ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ಪಾಲಿಕೆ ಸದಸ್ಯರಿಗೆ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡುವ ಸಭೆಯನ್ನು ಆಯೋಜಿಸಲಾಗಿತ್ತು.ಸಭೆಯಲ್ಲಿ ಸ್ಮಾರ್ಟ್ ಸಿಟಿಗೆ ಆಯ್ಕೆ ಮಾಡಿಕೊಳ್ಳಲಾದ ವಾರ್ಡುಗಳ ಸದಸ್ಯರು ಭಾಗವಹಿಸಿದ್ದು, ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದ ಆಯಾ ವಾರ್ಡು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಈ ವೇಳೆ ಸ್ಮಾರ್ಟ್ ರಸ್ತೆಗಳು, ಪಾರ್ಕ್‍ಗಳ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಲಾಗಿದ್ದು, ಪಾಲಿಕೆ ಸದಸ್ಯರು ಕೂಡ ಈ ಕಾಮಗಾರಿಗಳಿಗೆ ಸಹಕರಿಸುವುದಾಗಿ ತಿಳಿಸಿದ್ದಾರೆ ಎನ್ನಾಲಾಗಿದೆ.
ಈ ಸಂಬಂಧ ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನೀಡಲಾದ ಪ್ರತಿಕ್ರಿಯೆಯು ಈ ರೀತಿ ಇದ್ದು, ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್ ಅವರು, ಸ್ಮಾರ್ಟ್ ಸಿಟಿ ಕಚೇರಿಯಲ್ಲಿ ನೀಡಲಾದ ಮಾಹಿತಿಯನ್ನು ಸುಧೀರ್ಘವಾಗಿ ಚರ್ಚೆ ಮಾಡಿದ್ದು, ನಮ್ಮ ಅಭಿಪ್ರಾಯವನ್ನು ಕೂಡ ತಿಳಿಸಲಾಗಿದೆ. ಮುಂದೆ ನಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಕಾಮಗಾರಿಗಳ ಮತ್ತು ಮುಂದಿನ ಅಭಿವೃದ್ಧಿ ಬಗ್ಗೆ ನಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಿ ನಂತರ ಕಾಮಗಾರಿ ಮುಂದುವರೆಸುವಂತೆ ತಿಳಿಸಿದ್ದಾರೆ.
ಅದೇ ರೀತಿ 4ನೇ ವಾರ್ಡ್ ಪಾಲಿಕೆ ಸದಸ್ಯೆ ದೀಪಶ್ರೀ ಮಹೇಶ್‍ಬಾಬುರವರು, ಸ್ಮಾರ್ಟ್ ಸಿಟಿಯಿಂದ ಅನೇಕ ಮಾಹಿತಿಗಳನ್ನು ಪಡೆದುಕೊಂಡಿದ್ದು, ಎಲ್ಲಾ ಕಾಮಗಾರಿಗಳ ಬಗ್ಗೆ ಮಾಹಿತಿ ದೊರಕಿದೆ. ಇನ್ನೂ ಮುಂದೆ ಮಾಡಲಾಗುವ ವಿವಿಧ ಕಾಮಗಾರಿಗಳನ್ನು ಆಯಾ ವಾರ್ಡ್‍ನ ಪಾಲಿಕೆ ಸದಸ್ಯರ ಗಮನಕ್ಕೆ ತಂದು ಕಾಮಗಾರಿ ಮಾಡುವಂತೆ ಸಲಹೆ ನೀಡಿರುವುದಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಭೆಯಲ್ಲಿ ಪಾಲಿಕೆ ಸದಸ್ಯರಾದ ಮಹೇಶ್ ಟಿ.ಎಂ, ಕುಮಾರ್ ಜೆ, ಷಕೀಲ್ ಅಹಮ್ಮದ್ ಷರೀಫ್, ಇನಾಯತ್ ಉಲ್ಲಾ ಖಾನ್, ನಾಸಿರಾ ಬಾನು ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
