ಬೆಂಗಳೂರು ಯುವತಿಯ ಹರ್ ಘರ್ ತಿರಂಗಾ ವಿಶೇಷ ಅಭಿಯಾನ : ದೇಶಾದ್ಯಾಂತ ಏಕಾಂಗಿ ಪ್ರಯಾಣ ಇಂದು ಬೆಂಗಳೂರಿಗೆ ಆಗಮನ,

ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳನ್ನೂ ಮತ್ತು ಪ್ರಮುಖ ನಗರಗಳಿಗೆ ಭೇಟಿ

ಸಂಜೆ 5.00 ಗಂಟೆಗೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಕಾರ್ಯಕ್ರಮ

ಬೆಂಗಳೂರು : ಭಾರತ ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಸವಿನೆನಪಿನಲ್ಲಿ ಕಾಸರಗೋಡು ಮೂಲದ ಕನ್ನಡತಿ ಕು. ಅಮೃತಾ ಜೋಶಿ ರವರು ತಿರಂಗಾಯಾತ್ರೆ ಮೂಲಕ ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳನ್ನೂ ಮತ್ತು ಪ್ರಮುಖ ನಗರಗಳಿಗೆ ಭೇಟಿ ನೀಡಿ ಹರ್ ಘರ್ ತಿರಂಗಾ ಅಭಿಯಾನದ ಮಹತ್ವವನ್ನು ಜನರಿಗೆ ತಲುಪಿಸುತ್ತಿದ್ದು, ಇಂದು ಬೆಂಗಳೂರು ತಲುಪಲಿದ್ದಾರೆ.

ಈ ಹಿನ್ನೆಲೆಯಲ್ಲಿ ಕು. ಅಮೃತಾ ಜೋಶಿ ಅವರ ತಿರಂಗಾ ಯಾತ್ರೆ ಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿ ಸ್ವಾಗತಿಸಿ ಅವರನ್ನು ಬಿಬಿಎಂಪಿ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಹಾಗೂ ಇನ್ನಿತರೆ ಗಣ್ಯರುಗಳು ಉಪಸ್ಥಿತರಿರಲಿದ್ದಾರೆ.

ತ್ರಿವರ್ಣ ಧ್ವಜದೊಂದಿಗೆ ಕಾರ್ಯಕ್ರಮದ ವ್ಯವಸ್ಥೆ

ಬೆಂಗಳೂರಿನಲ್ಲಿ ನೆಲೆಸಿರುವ ಕಾಸರಗೋಡು ಮೂಲದ ಹಲವಾರು ಮಂದಿ ಗಣ್ಯರು ಮತ್ತು ನೂರಾರು ಜನರು ತ್ರಿವರ್ಣ ಧ್ವಜಗಳೊಂದಿಗೆ ಕಾಸರಗೋಡು ಗಡಿನಾಡ ಕನ್ನಡತಿ, ಸಾಹಸಿ ಯುವತಿ ಅಮೃತಾ ಜೋಶಿಯವರನ್ನು ಸ್ವಾಗತಿಸಲಿದ್ದು, ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಕಾಸರಗೋಡಿನವರ ಕಾರ್ಯಕ್ರಮಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗ ದೊರೆತಿರುವುದು ಗಡಿನಾಡ ಕನ್ನಡಿಗರಿಗೆ ಸಂದ ಗೌರವವಾಗಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಕಾಸರಗೋಡಿನ ಎಲ್ಲರೂ ಈ ಸಮಾರಂಭದಲ್ಲಿ ಭಾಗವಹಿಸಬೇಕೆಂದು ವಿಕಾಸ್ ಟ್ರಸ್‍ನ ಅಧ್ಯಕ್ಷ ರವಿನಾರಾಯಣ ಗುಣಾಜೆ ವಿನಂತಿಸಿದ್ದಾರೆ.

Recent Articles

spot_img

Related Stories

Share via
Copy link