ನವದೆಹಲಿ:
ರಾಷ್ಟ್ರ ರಾಜಧಾನಿಯ ಪ್ರಗತಿ ಮೈದಾನದಿಂದ ‘ಹರ್ ಘರ್ ತಿರಂಗಾ ಬೈಕ್ ರ‍್ಯಾಲಿ’ಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಶುಕ್ರವಾರ ಚಾಲನೆ ನೀಡಿದರು. ಕೇಂದ್ರ ಸಚಿವರಾದ ಜಿ. ಕಿಶನ್ ರೆಡ್ಡಿ, ಅನುರಾಗ್ ಠಾಕೂರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪಕ್ಷದ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ಪಾಲ್ಗೊಂಡರು. ಇದು ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ಅಂತಿಮಗೊಳ್ಳಲಿದೆ.
ಆಜಾದಿ ಕಾ ಅಮೃತ್ ಮಹೋತ್ಸವದಡಿ ರಾಷ್ಟ್ರದಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ. ಈ ಮೂಲಕ ಜನರು ತಮ್ಮ ಆವರಣದಲ್ಲಿ ಧ್ವಜಗಳನ್ನು ಹಾರಿಸಲು ಪ್ರೋತ್ಸಾಹಿಸಲಾಗುತ್ತದೆ. ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆ ತುಂಬುವುದು ಮತ್ತು ಮಹಾನ್ ರಾಷ್ಟ್ರವನ್ನು ರಚಿಸಲು ಕೊಡುಗೆ ನೀಡಿದವರನ್ನು ಸ್ಮರಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ.
ಕಳೆದ ವರ್ಷ ಈ ಅಭಿಯಾನವ ಅಗಾಧವಾದ ಯಶಸ್ಸನ್ನು ಕಂಡಿತು. ಕೋಟ್ಯಂತರ ಕುಟುಂಬಗಳು ತಮ್ಮ ಮನೆಗಳಲ್ಲಿ ಭೌತಿಕವಾಗಿ ತಿರಂಗಾವನ್ನು ಹಾರಿಸಿದ್ದರ ಮತ್ತು ಆರು ಕೋಟಿ ಜನರು ಹರ್ ಘರ್ ತಿರಂಗ ವೆಬ್‌ಸೈಟ್‌ನಲ್ಲಿ ಸೆಲ್ಫಿಗಳನ್ನು ಅಪ್‌ಲೋಡ್ ಮಾಡಿದ್ದರು.
ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿಶನ್ ರೆಡ್ಡಿ, ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಗಳಲ್ಲಿ ಆಗಸ್ಟ್ 15 ಮತ್ತು ಜನವರಿ 26 ರಂದು ತ್ರಿವರ್ಣ ಧ್ವಜವನ್ನು ಪ್ರದರ್ಶಿಸಬೇಕು. ಇದು ನಾಗರಿಕರ ಕರ್ತವ್ಯವಾಗಿದೆ. ಈ ವರ್ಷ ಆಗಸ್ಟ್ 15 ವಿಶೇಷವಾಗಿದೆ ಏಕೆಂದರೆ ಇದು ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಮುಕ್ತಾಯವನ್ನು ಸೂಚಿಸುತ್ತದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ