ಹರಪನಹಳ್ಳಿ :
ತಾಲೂಕಿನ ಅರಸೀಕೆರೆ ಗ್ರಾಮದ ಡಿವಿವಿಡಿಎಸ್ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿ ಕೊಳಚಿ ಹನುಮಂತಪ್ಪ (16) ಚಿಕ್ಕಕಬ್ಬಳ್ಳಿ ಗ್ರಾಮದ ಜಮೀನಿನಲ್ಲಿ ಹಾವು ಕಚ್ಚಿದ ಪರಿಣಾಮ ಗುರವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.
ಗ್ರಾಮದ ರಮೇಶ ಮತ್ತು ಸವಿತ ದಂಪತಿಯ ಪುತ್ರ. ಹನುಮಂತಪ್ಪ ಬೆಳಗ್ಗೆ ಹೋಲಕ್ಕೆ ಬಂದಿದ್ದ ಕೂಲಿ ಕಾರ್ಮಿಕರಿಗೆ ಚಹಾ ಕೊಡಲು ಹೋಗಿದ್ದಾಗ ಹಾವು ಕಡಿದಿದೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿ ಸಾವನ್ನಪ್ಪಿದ್ದರಿಂದ ಮನೆ ಮತ್ತು ಶಾಲೆಯಲ್ಲಿ ನೀರವ ಮೌನ ಆವರಿಸಿದೆ. ಅರಸಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.