ಹೊಸಬಾಂಬ್‌ ಸಿಡಿಸಿದ ಕುಮಾರಸ್ವಾಮಿ….!

ಬೆಂಗಳೂರು :

      ಮುಂದಿನ ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದರೆ, ಮತ್ತೊಂದೆಡೆ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ವೋ ಗೊತ್ತಿಲ್ಲ ಎಂದಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಈ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.

      ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತ ಪೂರ್ವ ಗೆಲುವು ಪಡೆದುಕೊಂಡು ಅಧಿಕಾರಕ್ಕೇರಿದೆ. ಆದ್ರೆ, ಸರ್ಕಾರದ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಹೊಸ ಬಾಂಬ್ ಹಾಕಿದ್ದಾರೆ.

       ನಗರದ ಅರಮನೆ ಮೈದಾನದಲ್ಲಿ ಗುರುವಾರ ಜೆಡಿಎಸ್ ಆತ್ಮವಲೋಕನ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ 5 ವರ್ಷಗಳ ಕಾಲ ಇರುತ್ತೋ ಇಲ್ಲವೋ ಗೊತ್ತಿಲ್ಲ. ಈ ಸರ್ಕಾರದ ಭವಿಷ್ಯ ಲೋಕಸಭಾ ಚುನಾವಣೆ ಮೇಲೆ ನಿಂತಿದೆ. ನಾನು ಭವಿಷ್ಯ ಹೇಳುತ್ತಿಲ್ಲ. ರಾಜಕೀಯ ಸ್ಥಿತಿಗತಿ ನೋಡಿ ಹೇಳುತ್ತಿದ್ದೇನೆ ಹೇಳಿದರು.

       ನಂಬಿದವರೇ ನಮಗೆ ಮೋಸ ಮಾಡಿದ್ರು, ಬೆನ್ನಿಗೆ ಚೂರಿ ಹಾಕಿದರು. ಆದ್ದರಿಂದ ನಾನು ನಿಮಗೆ ಹಣ ಸಹಾಯ ಮಾಡಲು ಆಗಲಿಲ್ಲ. ಆದ್ದರಿಂದ ನಾನು ಬಹಿರಂಗವಾಗಿ ಕ್ಷಮೆ ಕೇಳುತ್ತೇನೆ. ನಮ್ಮದು ಕುಟುಂಬ ರಾಜಕಾರಣ ಎಂದು ಟೀಕೆ ಮಾಡುತ್ತಾರೆ. ಹೀಗಾಗಿ ನೀವೆಲ್ಲರೂ ಮುಂದೆ ಬಂದು ಪಕ್ಷ ಸಂಘಟನೆ ಮಾಡಿ. ಸಿದ್ದರಾಮಯ್ಯ ಮೊಮ್ಮಗನನ್ನು ರಾಜಕೀಯಕ್ಕೆ ತರುತ್ತೇನೆ ಅಂತಾರೆ. ಅದು ಕುಟುಂಬ ರಾಜಕಾರಣ ಅಲ್ವಾ? ಯಾರೂ ಟೀಕೆ ಮಾಡಲ್ಲ ಎಂದರು.

       ಇನ್ನೊಂದೆಡೆ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಮುಂದಿನ ನಾಲ್ಕೆöÊದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ. ಈ ಸರ್ಕಾರ ಹೋಗುವಂತ ದಾರಿ ನೋಡಿದ್ರೆ ಬಹಳ ದಿನ ನಡೆಯಲ್ಲ ಎಂದು ಭವಿಷ್ಯ ನುಡಿದರು.

      ಬಿಜೆಪಿ ನಾಯಕರು, ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷÀದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ನವರಿಗೆ ನಮ್ಮ ಕಾರ್ಯಕರ್ತರು ತಲೆಬಾಗುವ ಪ್ರಶ್ನೆ ಇಲ್ಲ. ನಾವು ನಮ್ಮ ಹಣದಿಂದ ರಾಜಕೀಯ ಮಾಡುತ್ತಿದ್ದೇವೆ. ನಾವು ತಂದ ಜನಪರ ಕಾನೂನುಗಳನ್ನು ರದ್ದು ಮಾಡಲು ಹೊರಟಿದ್ದಾರೆ. ಎಲ್ಲೋ ಅಲ್ಪ ಸ್ವಲ್ಪ ವ್ಯತ್ಯಾಸ ಆಗಿದ್ದಕ್ಕೆ ನಾವು ಸೋತಿರಬಹುದು. ಆದ್ರೆ ಸ್ವಾಭಿಮಾನ ಕಳೆದುಕೊಂಡಿಲ್ಲ. ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಾಡುತ್ತೇವೆ. ಮತ್ತೆ ರಾಜ್ಯದಲ್ಲಿ 25 ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap