ಹೊಸ ಬಾಂಬ್‌ ಸಿಡಿಸಿದ ರಮೇಶ್‌ ಜಾರಕಿಹೋಳಿ…!

ಬೆಳಗಾವಿ: 

    ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ವಿಚಾರದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಅವರದ್ದೂ ಸಿಡಿ ಬರಬಹುದು ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

    ಗೋಕಾಕಿನಲ್ಲಿ‌ ಮತದಾನ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೊದಲಿನಿಂದ ಸಿಡಿ ವಿಚಾರದ ಕುರಿತು ಪದೇ ಪದೇ ಹೇಳಿಕೊಂಡು ಬಂದಿದ್ದೆ. ಆಗ ಎಲ್ಲರೂ ನನ್ನನ್ನು ನಿರ್ಲಕ್ಷ್ಯ ಮಾಡಿ ನಗುತ್ತಾ ಕುಳಿತಿದ್ದರು. ಇವತ್ತು ಒಬ್ಬರಿಗೆ ಆಗಿದೆ ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರಿಗೂ ಬರಬಹುದು. ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕು ಎಂದು ಸಿಎಂ ಅವರನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ ಅಂತಾ ಹೇಳಿದರು. 

    ”ನನ್ನ ಕೇಸ್​ನಲ್ಲೂ ಎಸ್‌ಐಟಿ ಮೇಲೆ ವಿಶ್ವಾಸ ಇಲ್ಲ. ಈಗಲೂ ಎಸ್ಐಟಿ ಮೇಲೆ ವಿಶ್ವಾಸ ಇಲ್ಲ‌. ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು. ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಎಂದರೆ ಈ ಕೇಸ್​ನಲ್ಲಿ ಫಿಕ್ಸ್ ಆಗಬೇಕು. ನನ್ನ ಕೇಸ್​ನಲ್ಲಿ ಬರೀ ಡಿಕೆ ಶಿವಕುಮಾರ್ ಭಾಗಿಯಾಗಿಲ್ಲ. ನಮ್ಮವರೂ ಕೇಸ್​ನಲ್ಲಿದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ. ಸತತ ನಾಲ್ಕು ವರ್ಷದಿಂದ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದ್ದು, ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ” ಎಂದರು.

    ”ಪ್ರಜ್ವಲ್​ ಲೈಂಗಿಕ ದೌರ್ಜನ್ಯ ಪ್ರಕರಣ ಯಾರೂ ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ. ಬಹಳ ಕೆಟ್ಟ ರೀತಿಯಲ್ಲಿ ಆಗಿದೆ. ರೇವಣ್ಣ ಕಾನೂನು ರೀತಿ ಹೋರಾಟ ಮಾಡಲಿ. ಕಾನೂನು ಒಂದೇ ಅದಕ್ಕೆ ಉತ್ತರ” ಎಂದು ರಮೇಶ ಜಾರಕಿಹೊಳಿ ಹೇಳಿದರು.

   ರಾಜಕಾರಣದಲ್ಲಿ ನನ್ನ ವಿರೋಧಿಗಳು ಪ್ರಬಲರು ಎಂದು ಮೊದಲಿನಿಂದಲೂ ಹೇಳುತ್ತ ಬಂದಿದ್ದೇನೆ. ನಮ್ಮ ವಿರೋಧಿಗಳು ಪ್ರಬಲರು ಎಂದು‌ ಕೆಲಸ ಮಾಡುತ್ತೇವೆ. ಎರಡು ಲಕ್ಷ ಮತಗಳಿಂದ ಗೆಲ್ಲುತ್ತೇವೆ ಎನ್ನುವ ವಿರೋಧಿಗಳು ಹತಾಶರಾಗಿದ್ದಾರೆಂದು ತಿಳಿದುಕೊಳ್ಳಬೇಕು ಎಂದು ರಮೇಶ ಜಾರಕಿಹೊಳಿ ಅಭಿಪ್ರಾಯಪಟ್ಟರು.

Recent Articles

spot_img

Related Stories

Share via
Copy link