ಅದಾನಿ ಸಂಸ್ಥೆ ಬಿಕ್ಕಟ್ಟು : ತನಿಖೆಗೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು:

ಅದಾನಿ ಸಮೂಹ ಸಂಸ್ಥೆಯ ಬಿಕ್ಕಟ್ಟನ್ನು ಸಂಸತ್ತಿಸ ಜಂಟಿ ಸದನ ಸಮಿತಿ ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಮತ್ತಿತರ ವಿಪಕ್ಷಗಳು ಗುರುವಾರ ಒತ್ತಾಯಿಸಿವೆ. ಸಾರ್ವಜನಿಕರ ಹಣಕ್ಕೆ ಸಂಬಧಿಸಿದ ವಿಷಯದ ಕುರಿತು ಜಂಟಿ ಸದನ ಸಮಿತಿ (ಜೆಪಿಸಿ) ಅಥವಾ ಸುಪ್ರೀಂ ಮೇಲ್ವಿಚಾರಣೆಯ ತನಿಖೆಯ ದೈನಂದಿನ ವರದಿಗೂ ವಿರೋಧ ಪಕ್ಷಗಳು ಕರೆ ನೀಡಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಸಾರ್ವಜನಿಕರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು, ಅದಾನಿ ಸಮೂಹ ಸಂಸ್ಥೆಯ ಬಿಕ್ಕಟ್ಟಿನ ಬಗ್ಗೆ ಜಂಟಿ ಸದನ ಸಮಿತಿ (ಜೆಪಿಸಿ) ಅಥವಾ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಯಾಗಬೇಕೆಂದು ನಾವು ಬಯಸುತ್ತೇವೆ. ಈ ವಿಷಯದ ತನಿಖೆ ಕುರಿತು ದೈನಂದಿನ ವರದಿಯಾಗಬೇಕು ಎಂದರು.

ಖರ್ಗೆ ಸೇರಿದಂತೆ ಹಲವು ಪ್ರತಿಪಕ್ಷಗಳ ಸದಸ್ಯರು ಅದಾನಿ ವಿಷಯದ ಬಗ್ಗೆ ಚರ್ಚಿಸಲು ನೋಟಿಸ್ ನೀಡಿದ್ದರು, ಆದರೆ ಅವುಗಳನ್ನು ಸಭಾಪತಿ ತಿರಸ್ಕರಿಸಿದ ನಂತರ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ್ದರಿಂದ ಉಭಯ ಸದನಗಳನ್ನು ಮಧ್ಯಾಹ್ನ ೨ ಗಂಟೆಗೆ ಮುಂದೂಡಲಾಯಿತು.

ಇತ್ತೀಚಿನ ದಿನಗಳಲ್ಲಿ ಕೋಟ್ಯಂತರ ಭಾರತೀಯರ ಉಳಿತಾಯಕ್ಕೆ ಅಪಾಯ ತಂದೊಡ್ಡಿರುವ ಎಲ್‌ಐಸಿ, ಎಸ್‌ಬಿಐ ಮತ್ತು ಇತರ ಸಾರ್ವಜನಿಕ ಸಂಸ್ಥೆಗಳ ಬಲವಂತದ ಹೂಡಿಕೆಗಳ ತನಿಖೆಗೆ ಸರ್ಕಾರವು ಒಪ್ಪದ ಕಾರಣ ಸಂಸತ್ತಿನ ಉಭಯ ಸದನಗಳನ್ನು ಇಂದು ಮಧ್ಯಾಹ್ನ ೨ ಗಂಟೆಗೆ ಮುಂದೂಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

 

Recent Articles

spot_img

Related Stories

Share via
Copy link