ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಸೂಚಿಸಿದ ಅಧಿಕಾರಿಗಳನ್ನು ನಿಯೋಜಿಸುತ್ತಿಲ್ಲ ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ.ನಾಗರಾಜು ಅವರು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಮುನಿಸಿಕೊಂಡಿದ್ದಾರೆ.
ತಮಗೆ ಬೇಕಾದ ಅಧಿಕಾರಿಗಳನ್ನು ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ವಿರುದ್ದ ಆರೋಪ ಮಾಡಿದರು. ನಾನೂ ಕೂಡಾ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಹೇಳಿದ ಅವರು, ಈ ಬಗ್ಗೆ ವರಿಷ್ಠರ ಮೇಲೆ ಒತ್ತಡ ತರುವುದಾಗಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ