ಬೆಂಗಳೂರು:
ಕರ್ನಾಟಕದ ಸಿಎಂ ಆಗಿರುವಂತ ಸಿದ್ಧರಾಮಯ್ಯ ಐದು ವರ್ಷಗಳ ಅವಧಿಯವರೆಗೆ ಇರಲಿದ್ದಾರೆ. ಎರಡೂವರೆ ವರ್ಷಗಳ ಬಳಿಕ ಬದಲಾವಣೆಯ ಚರ್ಚೆಯಾಗಿಲ್ಲ ಎಂಬುದಾಗಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದರು.
ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರಲ್ಲ ಎಂದು ಮಾಧ್ಯಮದವರು ವಿಧಾನಸೌಧದ ಬಳಿ ಮಾಧ್ಯಮದವರು ಗಮನ ಸೆಳೆದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು.
ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ, ಅಭಿನಂದನೆ ಸ್ವೀಕರಿಸುವೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ