ಅಧಿವೇಶನದ ಅತ್ಯಮೂಲ್ಯ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಿ: ಬಸವರಾಜ ಹೊರಟ್ಟಿ

ಬೆಂಗಳೂರು

     ಬೆಳಗಾವಿಯಲ್ಲಿ ಡಿ. 4 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ, ಸತ್ಯಾಗ್ರಹಗಳನ್ನು ಇಳಿಮುಖ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

    ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳು ನಡೆಯುತ್ತಿವೆ. ಇದರಿಂದ ಅಧಿವೇಶನದ ಅತ್ಯಮೂಲ್ಯವಾದ ಸಮಯ ವ್ಯರ್ಥವಾಗುತ್ತಿದೆ. ಹಾಗಾಗಿ ಅಧಿವೇಶನವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸುವಂತೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

    ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಕೃಷಿ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ ಹಾಗೂ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭವಾಗುವ ಮುನ್ನವೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸುವ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಸತ್ಯಾಗ್ರಹ ನಡೆಸದಂತೆ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು ಹಾಗೂ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

    ಪ್ರತಿಭಟನೆ ನಡೆಸುವ ಸಂಘಟನೆಗಳ ಜತೆ ಸಂಬಂಧಪಟ್ಟ ಸಚಿವರು ಮಾತನಾಡಿ ಪ್ರತಿಭಟನೆ ಆಗದಂತೆ ನೋಡಿಕೊಂಡರೆ ಅಧಿವೇಶನ ಅರ್ಥಪೂರ್ಣವಾಗಿ ನಡೆಯುವಂತಾಗುತ್ತದೆ ಎಂದು ಅವರು ಹೇಳಿದ್ದಾರೆ.

     ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಚರ್ಚೆಗಳು ನಡೆದು ಪರಿಹಾರ ಕಂಡುಕೊAಡರೆ ಉತ್ತರ ಕರ್ನಾಟಕದ ಭಾಗದಲ್ಲಿ ಅಧಿವೇಶನ ಸಾರ್ಥಕವಾಗಿ ನಡೆದು ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

 

Recent Articles

spot_img

Related Stories

Share via
Copy link
Powered by Social Snap