ಅನಾರೋಗ್ಯ : ಸಾಹಿತಿ ನಾ.ಡಿಸೋಜಾ ಆಸ್ಪತ್ರೆಗೆ ದಾಖಲು

ಮಂಗಳೂರು:

       ರಾಜ್ಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ನಾಡಿಸೋಜಾ ಅವರು  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

      ಕಳೆದ ನಾಲ್ಕು ದಿನದ ಹಿಂದೆ ಕಾಲು ನೋವು ಹಾಗೂ ಮಧುಮೇಹ ಉಲ್ಬಣದಿಂದಾಗಿ ತೀವ್ರ ಅಸ್ವಸ್ಥರಾಗಿದ್ದರು. ಹೆಚ್ವಿನ ಚಿಕಿತ್ಸೆಗಾಗಿ ಮಂಗಳೂರು ಆಸ್ವತ್ರೆಗೆ ದಾಖಲಿಸಲಾಗಿದ್ದು ನಾಲ್ಕು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ. ಸದ್ಯ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಇನ್ನೆರಡು ದಿನಗಳಲ್ಲಿ ಸಾಗರಕ್ಕೆ ಮರಳಲಿದ್ದಾರೆ ಎಂದು ತಿಳಿದುಬಂದಿದೆ. 

      ನಾ. ಡಿಸೋಜ ರವರು ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತಾ ಬಂದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಅಲ್ಲದೇ ದೇಶದಲ್ಲಿಯೇ ಸಾಹಿತ್ಯದ ಮೂಲಕವೇ ಮನೆಮಾತಾಗಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link