ನಾಯಕನಹಟ್ಟಿ :
ಪಟ್ಟಣದಲ್ಲಿ ಹಾದು ಹೋಗಿರುವ ಅರಭಾವಿ ಚಳ್ಳಕೆರೆ ರಾಜ್ಯ ಹೆದ್ದಾರಿ ೪೫ ರಲ್ಲಿ ಬರುವ ಮನಮೈನಹಟ್ಟಿ ಗ್ರಾಮದ ಹತ್ತಿರ ಮೇಲ್ಸೆತುವೆ ನಿರ್ಮಿಸಬೇಕೆಂದು ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗದ ಜಿಲ್ಲಾಧಿಕಾರಿ ವೆಂಕಟೇಶ್ ಸ್ಥಳ ಪರಿಶೀಲನೆ ನಡೆಸಿದ್ದರು ಕೂಡ ಕಾಮಗಾರಿ ಪ್ರಾರಂಭಗೊAಡಿಲ್ಲವೆAದು ಸಾರ್ವಜನಿಕರು ಆರೋಪ ಮಾಡಿದರು.
ಸುಮಾರು ೬-೭ ತಿಂಗಳ ಹಿಂದೆ ಸುರಿದ ಮಳೆಯಿಂದಾಗಿ ಮನಮೈನಹಟ್ಟಿ ಗ್ರಾಮದ ಕೆರೆ ಕೋಡಿ ಬಿದ್ದು ರಸ್ತೆಯ ಮೇಲೆ ನೀರು ಹರಿಯುವ ರಭಸಕ್ಕೆ ವಾಹನ ಸವಾರರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸುಮಾರು ೨೦ ಕಿ.ಮೀ ಸುತ್ತುವರೆದು ಚಳ್ಳಕೆರೆ ಪಟ್ಟಣಕ್ಕೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇಂತಹ ಸಂದರ್ಭದಲ್ಲಿ ಸ್ಥಳಿಯ ಶಾಸಕರಾದ ಎನ್.ವೈ.ಗೋಪಾಲಕೃಷ್ಣ ರವರ ಗಮನಕ್ಕೆ ತಂದಾಗ ಶೀಘ್ರವಾಗಿ ಮೇಲ್ಸೆತುವೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಆದೇಶಿಸಿ, ಅನುದಾನ ಮೀಸಲಿಟ್ಟದ್ದರು.
ನಂತರ ಶಾಸಕ ಎನ್.ವೈ.ಗೋಪಾಲಕೃಷ್ಣ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ಸ್ಥಳಕ್ಕೆ ಬೇಟಿ ನೀಡಿ ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದರು. ಬೇಸಿಗೆ ಮುಗಿದು ಮಳೆಗಾಲ ಪ್ರಾರಂಭವಾಗುತ್ತಿದ್ದು, ಬೇಸಿಗೆ ರಜೆ ಮುಗಿದು ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿವೆ.
ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂಬ ಹಿತ ದೃಷ್ಟಿಯಿಂದ ಶೀಘ್ರವಾಗಿ ಮೇಲ್ಸೆತುವೆ ಕಾಮಗಾರಿ ಪ್ರಾರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು.
ನಾಯಕನಹಟ್ಟಿ ಪರಿಶುದ್ಧ ಸ್ಥಳದಲ್ಲಿ ಮೇಲ್ಸೆತುವೆ ಮಾಡಿಸುತ್ತೇವೆ ಎಂದು ಶಾಸಕರು ಭರವಸೆಯಿಂದ ಹೇಳಿದ್ದರು. ಆದರೆ ಜಿಲ್ಲಾಡಳಿತ ಮೇಲ್ಸೆತುವೆ ಮಾಡಿಸುವಲ್ಲಿ ವಿಫಲವಾಗಿದೆ. ಶಾಸಕರು ಅನುದಾನವನ್ನು ನೀಡಿದ್ದರು ಕೂಡ ಜಿಲ್ಲಾಡಳಿತ ಯಾಕೋ ಗಮನ ಹರಿಸುತ್ತಿಲ್ಲ.
ಆ ಭಾಗದ ಗ್ರಾಮಸ್ಥರು ಸುಮಾರು ವರ್ಷಗಳಿಂದ ಮೇಲ್ಸೆತುವ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸುತ್ತಾ ಬಂದಿದ್ದರು, ಶಾಸಕರು, ಜಿಲ್ಲಾಧಿಕಾರಿಗಳು ಯಾವುದೇ ಒಂದು ಮಾತು ಭರವಸೆಯಿಂದ ಹೇಳುತ್ತಿಲ್ಲ. ಮುಂಬರುವ ಮಳೆಗೆ ಯಾರಿಗಾದರೂ ತೊಂದರೆಯಾದರೆ ಜಿಲ್ಲಾಡಳಿತ ನೇರ ಹೊಣೆ ಆಗಿರುತ್ತಾರೆ ಎಂದು ಸಾರ್ವಜನಿಕರು ಅಳಲು ತೊಡಿಕೊಂಡರು.
ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗದ ಜಿಲ್ಲಾಧಿಕಾರಿ ವೆಂಕಟೇಶ್ ಸ್ಥಳ ಪರಿಶೀಲನೆ ನಡೆಸಿದ್ದರು ಕೂಡ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಸಾರ್ವಜನಿಕರ ಆಕ್ರೋಷ.
