ಹುಳಿಯಾರು:
ಹುಳಿಯಾರು-ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬೆಳ್ಳಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಕಾಲೇಜು ಅಭಿವೃದ್ದಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.
ಶಾಸಕ ಜೆ.ಸಿ.ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 6 ತಿಂಗಳ ಕಾಲ ಪ್ರತಿ ಮಾಹೆ ಒಂದೊಂದು ವಿಶ್ವವಿದ್ಯಾಲಯ ಮಟ್ಟದ ಸ್ಪರ್ಧೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ತೀರ್ಮಾನಿಸಲಾಯಿತು.
ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ, ಜನಪತ ಗೀತೆ ಗಾಯನ ಸ್ಪರ್ಧೆ, ಕ್ರಿಡಾಕೂಟ ಹೀಗೆ ವಿವಿಧ ಸ್ಪರ್ಧೆಗಳನ್ನು ನಡೆಸುವ ಜೊತೆಗೆ ಮೆಡಿಕಲ್ ಕ್ಯಾಂಪ್ ನಡೆಸಿ 2019 ರ ಫೆಬ್ರವರಿ ಮಾಹೆಯ ಮೊದಲ ವಾರದಲ್ಲಿ ಬೆಳ್ಳಿಹಬ್ಬದ ಸಂಭ್ರಮಾಚರಣೆ ಮಾಡುವ ಜೊತೆಗೆ ರಾಜ್ಯ ಮಟ್ಟದ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ವಿಚಾರ ಸಂಕಿರಣ ನಡೆಸುವ ಬಗ್ಗೆ ನಿರ್ಧರಿಸಲಾಯಿತು.
ಬೆಳ್ಳಿ ಹಬ್ಬದ ನೆನಪಿಗಾಗಿ 10 ಲಕ್ಷ ರೂ. ವೆಚ್ಚದಲ್ಲಿ ಆಡಿಟೋರಿಯಂ ನಿಮಿಸಲು ಹಾಗೂ ಕಾಲೇಜಿನ ಮೇಲ್ಚಾವಣಿದುರಸ್ಥಿ ಮಾಡಲು ಈ ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲ್ಲಿ ಪ್ರಾಚಾರ್ಯ ಬಿಳಿಗೆರೆ ಕೃಷ್ಣಮೂರ್ತಿ, ವಿದ್ಯಾರ್ಥಿಗಳ ಪ್ರತಿನಿಧಿ ಕೆಂಕೆರೆ ನವೀನ್, ಸಿಡಿಸಿ ಸದಸ್ಯರುಗಳಾದ ರತ್ನರಂಜಿನಿ, ಮರುಳಸಿದ್ದಪ್ಪ, ಡಾ.ಉಮಾ, ಎಲ್.ಆರ್.ಬಾಲಾಜಿ, ಎಚ್.ನಜರುಲ್ಲಾ ಖಾನ್, ಎಚ್.ವಿ.ಅನಂತಕುಮಾರ್, ಶಿವಕುಮಾರ್ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ