ಹುಬ್ಬಳ್ಳಿ
ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವ ಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲ. ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲ. ಶಂಕರ್ ಪಾಟೀಲ್ ಮುನೇನಕೊಪ್ಪ ಅವರು ಪ್ರೆಸ್ ಮೀಟ್ ಕರೆದದ್ದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಕೇವಲ 9 ತಿಂಗಳು ಮಾತ್ರ ಬಾಕಿ ಉಳಿದಿದ್ದು, ಉತ್ತರ ಕರ್ನಾಟಕ ಭಾಗದ ಬಿಜೆಪಿ ನಾಯಕರನ್ನ ಸೆಳೆಯಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನುವ ಚರ್ಚೆ ಜೋರಾಗಿದ್ದು, ಬಿಜೆಪಿ ನಾಯಕ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಬರಲಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.
ಪಾಟೀಲ್ ಮುನೇನಕೊಪ್ಪ ಅವರೊಂದಿಗೆ ಮಾತನಾಡಿಲ್ಲ. ಈ ಬಗ್ಗೆ ನಾನು ಏನು ಹೇಳಲು ಬರಲ್ಲ. ಇನ್ನೂ ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರುತ್ತಿದ್ದಾರೆ. ಬಿಜೆಪಿ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ನಾಯಕನಿಲ್ಲದೆ ಸೊರಗುತ್ತಿದೆ. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇದುವರೆಗೂ ನೇಮಕ ಮಾಡಲಾಗುತ್ತಿಲ್ಲ ಅವರಿಗೆ ಈ ರೀತಿ ಶೋಚನಿಯ ಪರಿಸ್ಥಿತಿ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಬಂದಿರಲಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ