ಬೆಂಗಳೂರು:
ನಮ್ಮ ಸರ್ಕಾರ ತಂದ ಯೋಜನೆಗಳಲ್ಲಿ ಯಾವುದೇ ಗೊಂದಲ ಇಲ್ಲ. ಬಿಜೆಪಿ, ಜನತಾ ದಳದವರಿಗೆ ಈ ಯೋಜನೆ ಜಾರಿಯನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಸೂಯೆಗೆ ಮದ್ದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸರ್ಕಾರದಿಂದ ಯಾರಿಗೆ ಒಂದು ರೂಪಾಯಿ ಹಣ ಕೊಟ್ಟರೂ ಅದಕ್ಕೆ ಲೆಕ್ಕ, ಹೊಣೆಗಾರಿಕೆ ಇರಬೇಕು. ಫಲಾನುಭವಿ ಆಗುವವರು ಮತದಾರರ ಗುರುತಿನ ಚೀಟಿ, ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಹೊಂದಿರಬೇಕು. ಬೇರೆಯವರ ಬ್ಯಾಂಕ್ ಖಾತೆಗೆ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು. ಅವರ ಮನೆ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಮತದಾರರ ಗುರುತಿನಿ ಚೀಟಿ, ಎಪಿಎಲ್, ಬಿಪಿಎಲ್ ಕಾರ್ಡ್ ಗಳಲ್ಲಿ ಯಾವ ಮನೆಯಲ್ಲಿ ಯಾರೆಲ್ಲಾ ಇದ್ದಾರೆ ಎಂದು ಮಾಹಿತಿ ಇದೆ ಎಂದರು.
